ಕ್ಷೇತ್ರದ ಅಭಿವೃದ್ಧಿ ನಮ್ಮ ಗುರಿ: ಬಿಜೆಪಿ ಸೇರ್ಪಡೆಗೊಂಡ ಅನರ್ಹ ಶಾಸಕರು
ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ಹಾದಿ ಸುಗಮ ಮಾಡಿಕೊಂಡಿರುವ 17 ಮಂದಿ ಅನರ್ಹ ಶಾಸಕರಲ್ಲಿ ಗುರುವಾರ 16 ಮಂದಿ ಅನರ್ಹ ಶಾಸಕರು ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಬೆಂಗಳೂರು: ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ಹಾದಿ ಸುಗಮ ಮಾಡಿಕೊಂಡಿರುವ 17 ಮಂದಿ ಅನರ್ಹ ಶಾಸಕರಲ್ಲಿ ಗುರುವಾರ 16 ಮಂದಿ ಅನರ್ಹ ಶಾಸಕರು ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಇದಕ್ಕೂ ಮುನ್ನ ಬೆಂಗಳೂರಿನಲ್ಲಿರುವ ಕಾಡುಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅನರ್ಹ ಶಾಸಕರು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅನರ್ಹ ಶಾಸಕ ಬಿ.ಸಿ.ಪಾಟೀಲ್, ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಸೋಮವಾರ ಹಿರೇಕೆರೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ. ಬಿಜೆಪಿ ನಾಯಕ ಯು.ಬಿ.ಬಣಕಾರ್ ನನಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆ. ಪ್ರಚಂಡ ಬಹುಮತದಿಂದ ಜನ ನನ್ನನ್ನು ಆಯ್ಕೆ ಮಾಡುವ ವಿಶ್ವಾಸವಿದೆ ಎಂದರು.
ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, ಉಪಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸುವುದು, ಸೋಲಿಸುವುದು ಕ್ಷೇತ್ರದ ಮತದಾರರೇ ಹೊರತು ಬೇರೆ ನಾಯಕರಲ್ಲ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ನಮ್ಮ ಗುರಿ ಎಂದರು.
ಮತ್ತೊಬ್ಬ ಅನರ್ಹ ಶಾಸಕ ಡಾ.ಕೆ. ಸುಧಾಕರ್, ಸಿಎಂ ಯಡಿಯೂರಪ್ಪ ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಆಡಳಿತ ಮಾಡುತ್ತಿದ್ದಾರೆ. ದೇಶದ ಅಭಿವೃದ್ದಿಗಾಗಿ ಪ್ರಧಾನಿ ಮೋದಿ ಅವಿರತ ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಮಗೆ ಎಲ್ಲ ಸಹಕಾರ ನೀಡುವ ವಿಶ್ವಾಸವಿದೆ.ಹೀಗಾಗಿ ಬಿಜೆಪಿ ಸೇರಿದರೆ ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಕೇಸರಿ ಪಕ್ಷಕ್ಕೆ ಸೇರುತ್ತಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


