ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳು: ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ-ಅಥಣಿಯಿಂದ ರಾಜು ಕಾಗೆ
ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಅವರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಫೈನಲ್ ಮಾಡಿದೆ, ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ ಮತ್ತು ಅಥಣಿಯಿಂದ ರಾಜು ಕಾಗೆ ಅವರಿಗೆ ಟಿಕೆಟ್ ಫೈನಲ್ ಮಾಡಿದೆ.

ಬೆಳಗಾವಿ: ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ್ ಅವರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಫೈನಲ್ ಮಾಡಿದೆ, ಕಾಗವಾಡದಿಂದ ಪ್ರಕಾಶ್ ಹುಕ್ಕೇರಿ ಮತ್ತು ಅಥಣಿಯಿಂದ ರಾಜು ಕಾಗೆ ಅವರಿಗೆ ಟಿಕೆಟ್ ಫೈನಲ್ ಮಾಡಿದೆ.
ರಾಜುಕಾಗೆ ಕಾಗವಾಡ ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು, ಜೊತೆಗೆ ಅಥಣಿಯಲ್ಲೂ ಜನಪ್ರಿಯತೆ ಪಡೆದಿದ್ದರು, ಸ್ಥಳೀಯ ಸಂಸ್ಥಗಳು ಹಾಗೂ ಸಹಕಾರ ಸಂಘಟನೆಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಕಾಗವಾಡ ಕ್ಷೇತ್ರದಿಂದ ತಮ್ಮ ತಂದೆ ಪ್ರಕಾಶ್ ಹುಕ್ಕೇರಿ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುತ್ತದೆ ಎಂದು ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ ಹೇಳಿದ್ದರು. ಪ್ರಕಾಶ್ ಹುಕ್ಕೇರಿ ಅವರಿಂದ ಹೆಚ್ಚಿನ ಒತ್ತಾಯ ಬಂದಿದ್ದರಿಂದ, ಹೈಕಮಾಂಡ್ ಗುರುವಾರ ತಡರಾತ್ರಿ, ಅಥಣಿ ಗೆ ರಾಜು ಕಾಗೆಗೆ ಟಿಕೆಟ್ ನೀಡಿ, ಕಾಗವಾಡಕ್ಕೆ ಪ್ರಕಾಶ್ ಹುಕ್ಕೇರಿ ಅವರನ್ನು ಫೈನಲ್ ಮಾಡಿದೆ.
ಕಾಗವಾಡ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಸೇರುವುದರಿಂದ ಈ ಭಾಗದಲ್ಲಿ ಹುಕ್ಕೇರಿ ಕುಟುಂಬಕ್ಕೆ ಅಪಾರವಾದ ಜನ ಬೆಂಬಲವಿದೆ, ಹೀಗಾಗಿ ಪ್ರಕಾಶ್ ಹುಕ್ಕೇರಿಗೆ ಕಾಗವಾಡ ಟಿಕೆಟ್ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


