ರಾಜಕೀಯ

ಉಪ ಚುನಾವಣೆ ಗೆಲ್ಲಲು ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ

ರಾಜ್ಯ ವಿಧಾನಸಭೆ ಉಪಚುನಾವಣೆಯ ನ್ನು ಎದುರಿಸುವ ಕುರಿತು ಸೂಕ್ತ ಕಾರ್ಯತಂತ್ರ ರೂಪಿಸುವ ಜತೆಗೆ ಚುನಾವಣಾ ಉಸ್ತುವಾರಿಯನ್ನು ಮಾಜಿ ಸಚಿವರು, ಶಾಸಕರಿಗೆ ವಹಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಉಪ ಚುನಾವಣೆ ಗೆಲ್ಲಲು ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜ್ಯ ವಿಧಾನಸಭೆ ಉಪಚುನಾವಣೆಯ ನ್ನು ಎದುರಿಸುವ ಕುರಿತು ಸೂಕ್ತ ಕಾರ್ಯತಂತ್ರ ರೂಪಿಸುವ ಜತೆಗೆ ಚುನಾವಣಾ ಉಸ್ತುವಾರಿಯನ್ನು ಮಾಜಿ  ಸಚಿವರು, ಶಾಸಕರಿಗೆ ವಹಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ  ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ  ಪಕ್ಷದ ಸಭೆಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ತಂತ್ರಗಾರಿಕೆ ಕುರಿತು ಮಹತ್ವದ ಸಭೆ ನಡೆಯಿತು. 

ಉಪಚುನಾವಣೆಯನ್ನು  ಪ್ರತಿಷ್ಠೆಯಾಗಿ ಪರಿಗಣಿಸಿರುವ ಜೆಡಿಎಸ್ ಶತಾಯಗತಾಯ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಕಾರ್ಯತಂತ್ರಗಳ ರೂಪುರೇಷೆ ಬಗ್ಗೆ ನಾಯಕರು ಗಂಭೀರ ಚರ್ಚೆ ನಡೆಸಿದರು.

ನಾಳೆ ಸಂಜೆ ವೇಳೆಗೆ ಎಲ್ಲಾ ಕ್ಷೇತ್ರಗಳ ಉಸ್ತುವಾರಿ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಕಾಂತಾರಾಜುಗೆ ಟಿಕೆಟ್ ನೀಡಲು ಉದ್ದೇಶಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.