ಭೂ ಕಬಳಿಕೆ ಮಾಡಿಲ್ಲ: ಆರೋಪ ಮಾಡಿರುವವರ ಮೇಲೆ ಮಾನನಷ್ಟ ಮೊಕದ್ದಮೆ- ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ
ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು, ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು, ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮೇಲೆ ಅನಗತ್ಯ ಆರೋಪ ಮಾಡಿರುವವರಿಗೆ ಬುದ್ದಿ ಭ್ರಮಣೆಯಾಗಿದೆ. ಈ ರೀತಿ ಮಂಗನಾಟ ಆಡುವವರನ್ನು ಬಿಜೆಪಿ ವಕ್ತಾರರನ್ನಾಗಿ ನೇಮಿಸಿಕೊಂಡಿರುವುದು ತಮಗೆ ಅಚ್ಚರಿ ತರಿಸಿದೆ ಎಂದರು.
ಬೆಂಗಳೂರಿನ ಭವಾನಿ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯ ಕೆಲವರು ಈ ವರ್ಷದ ಜನವರಿಯಲ್ಲಿ ಅರ್ಜಿಗಳ ಸಮಿತಿಗೆ ಮನವಿ ಸಲ್ಲಿಸಿ ಬನಶಂಕರಿ ೩ನೇ ಹಂತದ ಭವಾನಿ ಲೇಔಟ್‌ನಲ್ಲಿ ಮಹಾನಗರ ಪಾಲಿಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸ.ನಂ. ೧೨೫ ಮತ್ತು ೧೨೬ ರಲ್ಲಿ ಉದ್ಯಾನವನ ಮತ್ತು ಮೈದಾನ ಅಭಿವೃದ್ಧಿ ಮಾಡುತ್ತಿದೆ ಎಂದು ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


