ಸಿಪಿ ಯೋಗೇಶ್ವರ್ ಸೀರೆ ರಾಜಕೀಯ: ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆ ವಶ
ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.

ಮೈಸೂರು: ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.
ಮೈಸೂರಿನ ವಿಜಯನಗರದ ಮನೆಯೊಂದರಲ್ಲಿ ಸುಮಾರು 30 ಸಾವಿರ ಸೀರೆಗಳನ್ನು ತುಂಬಿಸಿಡಲಾಗಿತ್ತು, ಈ ಸೀರೆಗಳ ಕವರ್ ಮೇಲೆ ಯೋಗೇಶ್ವರ್ ಗೆ ಮತ ಹಾಕುವಂತೆ ಕರ ಪತ್ರ ಇಡಲಾಗಿತ್ತು. ಮಾಹಿತಿ ಆಧರಿಸಿ ದಾಳಿ ಮಾಡಿದ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದು ಕೊಂಡಿದ್ದಾರೆ.
ಸಿಪಿ ಯೋಗೇಶ್ವರ್ ಹುಣಸೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು, ಆದರೆ ಬದಲಾದ ರಾಜಕೀಯ ಸನ್ನಿವೇಶಗಳಿಂದ ಎಚ್ ವಿಶ್ವನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಅಭ್ಯರ್ಥಿ ಘೋಷಣೆಗೂ ಮುನ್ನವೇ ಸೀರೆ ಸಂಗ್ರಹಿಸಲ್ಟಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಸಂಬಂಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


