ಉಪಸಮರ: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ,ಕೇಂದ್ರ ಸಚಿವರು,ಸಂಸದರಿಗೆ ಸ್ಥಾನ
15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಆಗಿದ್ದು,ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಮುಖ್ಯಮಂತ್ರಿ ಯಡಿಯೂರಪ್ಪ,ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ,ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯ ಸಚಿವರು,ಸಂಸದರು,ಹಾಗೂ ಬಿಜೆಪಿಯ ಪ್ರಮುಖ ನಾಯಕರು ಸೇರಿದಂತೆ 40 ಪ್ರಮುಖ ಸ್ಟಾರ್ ಪ್ರಚಾರಕರ ಸ್ಥಾನವನ್ನು ನೀಡಲಾಗಿದೆ.

ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಆಗಿದ್ದು,ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ಮುಖ್ಯಮಂತ್ರಿ ಯಡಿಯೂರಪ್ಪ,ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ,ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯ ಸಚಿವರು,ಸಂಸದರು,ಹಾಗೂ ಬಿಜೆಪಿಯ ಪ್ರಮುಖ ನಾಯಕರು ಸೇರಿದಂತೆ 40 ಪ್ರಮುಖ ಸ್ಟಾರ್ ಪ್ರಚಾರಕರ ಸ್ಥಾನವನ್ನು ನೀಡಲಾಗಿದೆ.
ಇನ್ನೂ ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರಗೆ ಸ್ಥಾನ ಇಲ್ಲ,ಇನ್ನೊಬ್ಬ ಪುತ್ರ ಸಂಸದ ಬಿ. ವೈ ರಾಘವೇಂದ್ರಗೂ ಪಟ್ಟಿಯಲ್ಲಿ ಸ್ಥಾನವನ್ನು ನೀಡಿಲ್ಲ. ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಾಜ್ಯ ಬಿಜೆಪಿ ಬಿಡುಗಡೆಗೊಳಿಸಿದ್ದು ಸಿಎಂ ಬಿಎಸ್‌ವೈಗಿಂತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ.
ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಅವರ ನಡುವೆ ಶೀತಲ ಸಮರ ನಡೆಯುತ್ತಿದೆ ಎಂಬ ಊಹಾಪೋಹಗಳ ಬೆನ್ನಲ್ಲೇ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸಿಎಂ ಗಿಂತ ಮೇಲೆ ನಳಿನ್ ಅವರ ಹೆಸರು ಕಾಣಿಸಿಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಇನ್ನು ಬಿಜೆಪಿ ಬಿಡುಗಡೆಗೊಳಿಸಿದ ಸ್ಟಾರ್ ಪ್ರಚಾರಕರ ಪಟ್ಟಿ ಹೀಗಿದೆ-

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


