ರಾಜಕೀಯ

ಷರತ್ತಿಲ್ಲದೆ ಬಿಜೆಪಿ ಸೇರಿದ್ದೇನೆ- ಪ್ರತಾಪ್ ಗೌಡ ಪಾಟೀಲ್ 

ಶೀಘ್ರವೇ ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೫೫೦ ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ.

ಷರತ್ತಿಲ್ಲದೆ ಬಿಜೆಪಿ ಸೇರಿದ್ದೇನೆ- ಪ್ರತಾಪ್ ಗೌಡ ಪಾಟೀಲ್ 
ಪ್ರತಾಪ್ ಗೌಡ ಪಾಟೀಲ್
Published On :

ರಾಯಚೂರು: ಶೀಘ್ರವೇ ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೫೫೦ ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ ಸೇರಿದ ನಂತರ ಇದೇ ಪ್ರಥಮ ಬಾರಿಗೆ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಿಲ್ಲದೆ ಕ್ಷೇತ್ರ ಅನಾಥವಾಗಿಲ್ಲ. ಸಂಸದ ಸಂಗಣ್ಣ ಕರಡಿ ಕ್ಷೇತ್ರದ ಅಭಿವೃದ್ಧಿ ಕುರಿತು ಪರಿಶೀಲನೆ ಮಾಡುತ್ತಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ೧೦೦ ದಿನಗಳಲ್ಲಿ ೧೦೦ ಕೋ.ರೂ ಅನುದಾನ ಮಂಜೂರಾಗಿದೆ ಎಂದು ಹೇಳಿದರು.

ಮಸ್ಕಿ ಕ್ಷೇತ್ರದ ೧೩ ಕೆರೆಗಳ ಭರ್ತಿಗೆ ಹಾಗೂ ಮಸ್ಕಿ ನಾಲಾ ಮತ್ತು ಕನಕ ನಾಲಾ ಯೋಜನೆಗಳಿಗೆ ಬರುವ ಕೆಲವೇ ದಿನಗಳಲ್ಲಿ ೫೦೨ ಕೋ.ರೂ ಅನುದಾನ ಮಂಜೂರಾಗಲಿದೆ. ಈ ಮೂಲಕ ಕ್ಷೇತ್ರದ ಬಹುದಿನಗಳ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿದ್ದಾರೆ ಎಂದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.