ಸವದಿ ಬೇಕು, ಕುಮಟಳ್ಳಿ ಬೇಡವೇ ಬೇಡ: ಅಥಣಿ ಬಿಜೆಪಿ ಕಾರ್ಯಕರ್ತರು
ಡಿಸೆಂಬರ್ 5 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಟಳ್ಳಿ ಕಣಕ್ಕಿಳಿದಿದ್ದಾರೆ, ಆದರೆ ಇಲ್ಲಿನ ಸ್ಥಳೀಯ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಹಾಗಾಗಿ ಮಹೇಶ್ ಕುಮಟಳ್ಳಿ ವಿರುದ್ಧ ಆನ್ ಲೈನ್ ಕ್ಯಾಂಪೇನ್ ಆರಂಭವಾಗಿದೆ.

ಬೆಳಗಾವಿ: ಡಿಸೆಂಬರ್ 5 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಕುಮಟಳ್ಳಿ ಕಣಕ್ಕಿಳಿದಿದ್ದಾರೆ, ಆದರೆ ಇಲ್ಲಿನ ಸ್ಥಳೀಯ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಹಾಗಾಗಿ ಮಹೇಶ್ ಕುಮಟಳ್ಳಿ ವಿರುದ್ಧ ಆನ್ ಲೈನ್ ಕ್ಯಾಂಪೇನ್ ಆರಂಭವಾಗಿದೆ.
ಮಹೇಶ್ ಕುಮಟಳ್ಳಿ ಅವರನ್ನು ನಮ್ಮ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಹೀಗಾಗಿ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಮಹೇಶ್ ಕುಮಟಳ್ಳಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಇನ್ನು ಒಂದು ದಿನ ಸಮಯವಿದೆ, ಒಂದು ವೇಳೆ ಲಕ್ಷ್ಮಣ ಸವದಿ ಅವರಿಗೆ ನೀಡಬೇಕು, ಇಲ್ಲದಿದ್ದರಾ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಾವು ಯಾವುದೇ ಕಾರಣಕ್ಕೂ ಮಹೇಶ್ ಕುಮಠಳ್ಳಿ ಅವರಿಗೆ ಮತ ಚಲಾಯಿಸುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಅವರಿಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


