ಕೈಕೊಟ್ಟ ಜೆಡಿಎಸ್-ಬಿಜೆಪಿ: ಉಪಚುನಾವಣಾ ಕಣದಿಂದ ರೋಷನ್ ಬೇಗ್ ಔಟ್!
ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಅನರ್ಹ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬೆಂಗಳೂರು: ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಅನರ್ಹ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಬಿಜೆಪಿ ಪಕ್ಷದಿಂದ ಟಿಕೆಟ್ ಕೈತಪ್ಪಿದ್ದರಿಂದ ಬೇಗ್ಅವರು ಅತಂತ್ರರಾಗಿದ್ದರು. ಐಎಂಎ ಹಗರಣದಲ್ಲಿ ಬೇಗ್ ಹೆಸರು ತಳುಕುಹಾಕಿಕೊಂಡಿದ್ದರಿಂದ ಬಿಜೆಪಿ ಟಿಕೆಟ್ನೀಡಿಲ್ಲ ಎನ್ನಲಾಗುತ್ತಿದೆ ಸಾಮಾಜಿಕ ಜಾಲತಾಣದಲ್ಲಿ ಶಿವಾಜಿನಗರ ಜನತೆಗೆ ಕೃತಜ್ಞತೆ ಸಲ್ಲಿಸಿರುವ ರೋಷನ್ ಬೇಗ್ಐಎಂಎ ಪ್ರಕರಣದಿಂದ ಚುನಾವಣೆಯಲ್ಲಿ ಹಿನ್ನಡೆ ಆಗುವ ಆತಂಕದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದು,ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯುವ ತೀರ್ಮಾನವನ್ನು ಕೈಕೊಂಡಿದ್ದಾರೆ.
ನಿನ್ನೆ ಅನರ್ಹ ಶಾಸಕ ರೋಷನ್ ಬೇಗ್ ಬೆಂಬಲಿಗರ ಸಭೆ ನಡೆಸಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ನಿಂದ ದೂರವಾಗಿ, ಬಿಜೆಪಿಗೆ ಬೇಡವಾಗಿ ಅತಂತ್ರ ಸ್ಥಿತಿಯಲ್ಲಿದ್ದ ರೋಷನ್ ಬೇಗ್ ಭಾನುವಾರ ಹಾಸನಕ್ಕೆ ತೆರಳಿ ಜೆಡಿಎಸ್ ನಾಯಕರ ಜತೆಗೆ ರಹಸ್ಯ ಮಾತುಕತೆ ನಡೆಸಿದ್ದರು.ಆದರೆ ಜೆಡಿಎಸ್ ಟಿಕೆಟ್ ಸಿಗದಿದ್ದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದರು ಎನ್ನಲಾಗಿದೆ.
ಆದರೆ ಅಂತಿಮ ಕ್ಷಣದಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ಬಿಜೆಪಿ ಅಭ್ಯರ್ಥಿಗೆ ಗೆಲುವಿಗೆ ಬೆಂಬಲಿಸುವಂತೆ ಬಿಜೆಪಿ ವರಿಷ್ಠರು ಮನವೊಲಿಸಿದ್ದಾರೆ ಎನ್ನಲಾಗಿದೆ.
ಐಎಂಎ ಪ್ರಕರಣ,ರುದ್ರೇಶ್ ಹತ್ಯೆ ಪ್ರಕರಣಗಳು ಅವರಿಗೆ ಉರುಳಾಗಿರುವ ಹಿನ್ನೆಲೆ ರೋಷನ್ ಬೇಗ್ ಪ್ರಕರಣಗಳಿಂದ ಹೊರ ಬರಬರುವ ತನಕ ಯಾವುದೇ ರಾಜಕೀಯ ಪಕ್ಷಗಳು ಅವರನ್ನು ಹತ್ತಿರ ಸೇರಿಸಕೊಳ್ಳಲು ಹಿಂದೇಟು ಹಾಕಿವೆ.ರಾಜಕೀಯ ಭವಿಷ್ಯ ಹಾಗೂ ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ ಹಿನ್ನಲೆಯಲ್ಲಿ ಪಕ್ಷೇತರನಾಗಿ ಕಣಕ್ಕಿಳಿಯುವಂತೆ ಬೆಂಬಲಿಗರು ಒತ್ತಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


