15 ಕ್ಷೇತ್ರಗಳ ನಾಮಪತ್ರ ಸಲ್ಲಿಕೆ ಮುಕ್ತಾಯ: ಮಿನಿ ಮಹಾಸಮರಕ್ಕೆ ಬಿರುಸಿನ ಪ್ರಚಾರ
ನಾಮಪತ್ರ ಸಲ್ಲಿಕೆಗೆ ಕೊನೆಯ ಸೋಮವಾರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಈ ಮೂರು ಪಕ್ಷಗಳ ಘಟನಾಘಟಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಹದಿನೈದು ಕ್ಷೇತ್ರಗಳ ಉಪ ಚುನಾವಣಾ ಕಣಕ್ಕೆ ಅಖಾಡ ಸಜ್ಜಾಗಿದ್ದು, ಡಿಸೆಂಬರ್ 5 ರಂದು ಉಪಕಣದ ಕದನಕ್ಕೆ ವೇದಿಕೆ ಸಿದ್ದವಾಗಿದೆ.

ಬೆಂಗಳೂರು: ನಾಮಪತ್ರ ಸಲ್ಲಿಕೆಗೆ ಕೊನೆಯ ಸೋಮವಾರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಈ ಮೂರು ಪಕ್ಷಗಳ ಘಟನಾಘಟಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಹದಿನೈದು ಕ್ಷೇತ್ರಗಳ ಉಪ ಚುನಾವಣಾ ಕಣಕ್ಕೆ ಅಖಾಡ ಸಜ್ಜಾಗಿದ್ದು, ಡಿಸೆಂಬರ್ 5 ರಂದು ಉಪಕಣದ ಕದನಕ್ಕೆ ವೇದಿಕೆ ಸಿದ್ದವಾಗಿದೆ.
ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಕಾಂಗ್ರೆಸ್ ಅಭ್ಯರ್ಥಿ ಆಂಜಿನಪ್ಪ ಇಂದು ನಾಮಪತ್ರ ಸಲ್ಲಿಸಿದರು.ವಿಚಿತ್ರ ಹಾಗೂ ವಿಶೇಷವೆಂದರೆ ಜೆಡಿಎಸ್ ಪಕ್ಷದಿಂದ ಕೆ.ಪಿ.ಬಚ್ಚೇಗೌಡ ಹಾಗೂ ರಾಧಾಕೃಷ್ಣ ಇಬ್ಬರು ನಾಮಪತ್ರ ಸಲ್ಲಿಸುವ ಮೂಲಕ ಗೊಂದಲ, ಕುತೂಹಲಕ್ಕೆ ಕಾರಣವಾಗಿದ್ದಾರೆ.
ಇತ್ತ ಯಶವಂತಪುರ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್,ಕಾಂಗ್ರೆಸ್ ಅಭ್ಯರ್ಥಿ ಪಿ.ನಾಗರಾಜ್, ಹಾಗೂ ಜೆಡಿಎಸ್ ಅಭ್ಯರ್ಥಿ ಜವರಾಯಿ ಗೌಡರೂ ನಾಮಪತ್ರ ಸಲ್ಲಿಸಿದರು.
ಅತ್ತ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್,ಕಾಂಗ್ರೆಸ್ ಅಭ್ಯರ್ಥಿ ನಾರಾಯಣ ಸ್ವಾಮಿ,ಜೆಡಿಎಸ್ ಅಭ್ಯರ್ಥಿ ಸಿ.ಕೃಷ್ಣಮೂರ್ತಿ ಅಪಾರ ಬೆಂಬಲಿಗರ ಮೆರವಣಿಗೆ ಜೊತೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ ಇಂದು ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಿದರು. ಇದಾದ ಬಳಿಕ ನಗರಸಭೆ ಆವರಣದ ಮುನೇಶ್ವರ ಕಾವಲ್ ಮೈದಾನದಲ್ಲಿ ಆಯೋಜನೆಗೊಂಡಿರುವ ಬಿಜೆಪಿ ಸಭೆಯಲ್ಲಿ ಅವರು ಭಾಗಿಯಾಗಿದ್ದರು, ಕಾಂಗ್ರೆಸ್ ನಿಂದ ಎಚ್, ಪಿ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


