ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿ: ಸಚಿವ ಶ್ರೀರಾಮುಲು
ಉಪಚುನಾವಣೆ ಬಳಿಕ ಬಿಎಸ್ ಯಡಿಯೂರಪ್ಪನವರ ಸರ್ಕಾರ ಇರುವುದಿಲ್ಲ ಎಂದು ವಿಪಕ್ಷದ ನಾಯಕರು ಭವಿಷ್ಯ ನುಡಿಯುತ್ತಿದ್ದು ಇದರ ಮಧ್ಯೆ ಸಚಿವ ಶ್ರೀರಾಮುಲು ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ಹುಣಸೂರು: ಉಪಚುನಾವಣೆ ಬಳಿಕ ಬಿಎಸ್ ಯಡಿಯೂರಪ್ಪನವರ ಸರ್ಕಾರ ಇರುವುದಿಲ್ಲ ಎಂದು ವಿಪಕ್ಷದ ನಾಯಕರು ಭವಿಷ್ಯ ನುಡಿಯುತ್ತಿದ್ದು ಇದರ ಮಧ್ಯೆ ಸಚಿವ ಶ್ರೀರಾಮುಲು ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ ಶ್ರೀರಾಮುಲು ಅವರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಲು ಗೆದ್ದ 24 ಗಂಟೆಯೊಳಗೆ ಅವರಿಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಹೇಳಿದರು.
ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ದೂಳೀಪಟವಾಗಿ ಬಿಜೆಪಿ ಮೈಲುಗೈ ಸಾಧಿಸುವುದು ನಿಶ್ಚಿತ ಎಂದರು.
ನನಗೆ ಇನ್ನು ವಯಸ್ಸಿದೆ. ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿಯಾಗುವೆ. ಸದ್ಯಕ್ಕೆ ಬಿಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಅನುಭವ ಪಡೆಯುವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


