ರಾಜಕೀಯ

ಸಿದ್ದರಾಮಯ್ಯಗೆ ನನ್ನ ಮೇಲೆ ಪ್ರೀತಿ ಜಾಸ್ತಿಯಾಗಿದೆ: ಸಚಿವ ಶ್ರೀರಾಮುಲು

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ ಆಗಿದೆ. ಹೀಗಾಗಿ ಅವರು ನಾನು ಡಿಸಿಎಂ ಆಗಬೇಕು ಎಂದು ಬಯಸಿದ್ದಾರೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ.

ಸಿದ್ದರಾಮಯ್ಯಗೆ ನನ್ನ ಮೇಲೆ ಪ್ರೀತಿ ಜಾಸ್ತಿಯಾಗಿದೆ: ಸಚಿವ ಶ್ರೀರಾಮುಲು
ಶ್ರೀರಾಮುಲು
Published On :

ಕೊಪ್ಪಳ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ ಆಗಿದೆ. ಹೀಗಾಗಿ ಅವರು ನಾನು ಡಿಸಿಎಂ ಆಗಬೇಕು ಎಂದು ಬಯಸಿದ್ದಾರೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಗುರುವಾರ ಹೇಳಿದ್ದಾರೆ. 

ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿಯಾಗಿದೆ. ಅ ಕಾರಣಕ್ಕೆ ನಾನು ಡಿಸಿಎಂ ಆಗಬೇಕೆಂದು ಬಯಸಿದ್ದಾರೆ ಎಂದರು.

ನಾನು ಡಿಸಿಎಂ ಆಗಬೇಕೆಂದು ಜನ ಬಿಂಬಿಸಿದ್ದರು. ಇವತ್ತು ಅದೇ ಮಾತನ್ನ ಸಿದ್ದರಾಮಯ್ಯ ಅವರೂ ಹೇಳ್ತಿದಾರೆ. ನಾನು ಮತ್ತು ಸಿದ್ದರಾಮಯ್ಯ ಒಳ್ಳೆಯ ಸ್ನೇಹಿತರು. ನಾವಿಬ್ಬರೂ ತಳ ಸಮುದಾಯದಿಂದ ಬಂದವರು ಎಂದರು.

ಇದೇ ವೇಳೆ ಉಪ ಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ನಿನ್ನೆಯಷ್ಟೇ ಸಿದ್ದರಾಮಯ್ಯ ಅವರು, ಮಾನ ಮಾರ್ಯಾದೆ ಇದ್ದಿದ್ದೇ ಆದಲ್ಲಿ ಬಿಜೆಪಿ ಅವರನ್ನು ಉಪ ಮುಖ್ಯಮಂತ್ರಿ ಮಾಡದೇ ಶಾಸಕರಲ್ಲದ ಲಕ್ಷ್ಮಣ್ ಸವದಿಗೆ ಹುದ್ದೆ ನೀಡಿದಾಗಲೇ ರಾಮುಲು ರಾಜೀನಾಮೆ ಕೊಡಬೇಕಿತ್ತು ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.