'ಕಾಂಗ್ರೆಸ್ 35 ಶಾಸಕರು ನನ್ನೊಟ್ಟಿಗಿದ್ದಾರೆ: ಎಲ್ಲರನ್ನು ಕರೆ ತಂದು ಕಾಂಗ್ರೆಸ್ ಖಾಲಿ ಮಾಡುವ ಶಕ್ತಿ ನನಗಿದೆ'
ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಪ್ರಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬ್ಯುಸಿಯಾಗಿವೆ,ಅದೇ ಹೊತ್ತಲ್ಲೆ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಪ್ರಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬ್ಯುಸಿಯಾಗಿವೆ,ಅದೇ ಹೊತ್ತಲ್ಲೆ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಮೊದಲು ನನಗೆ 17 ಶಾಸಕರ ಬೆಂಬಲವಿತ್ತು, ಈಗ ಕಾಂಗ್ರೆಸ್ ನ ಇನ್ನೂ 35 ಶಾಸಕರು ನನ್ನ ಜೊತೆ ಇದ್ದಾರೆ, ಆವರೆಲ್ಲರನ್ನು ಕರೆತಂದು ಕಾಂಗ್ರೆಸ್ ಖಾಲಿ ಮಾಡುವ ಶಕ್ತಿ ನನಗಿದೆ.
ಗೋಕಾಕ್ ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ಕಾಂಗ್ರೆಸ್ ನಾಯಕರು ಅಸಂಬದ್ಧವಾದ ಆರೋಪ ಮಾಡಿದರೇ ನಾನು ಏನು ಎಂಬುದನ್ನು ತೋರಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಮತ್ತೆ ಉಪ ಚುನಾವಣೆ ಎದುರಾಗಲು ಕಾಂಗ್ರೆಸ್ ನಾಯಕರ ಬೇಜಾವಾಬ್ದಾರಿ ವರ್ತನೆ ಕಾರಣ ಎಂದು ಆರೋಪಿಸಿದ್ದಾರೆ, ಹಣ ಮತ್ತು ಅಧಿಕಾರದ ಆಸೆಗೆ ನಾನು ಬಿಜೆಪಿ ಸೇರಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ, ನನಗೆ ನನ್ನ ಕ್ಷೇತ್ರದ ಅಭಿವೃದ್ಧಿ ಹಾಗೂ ಜನಗಳ ಹಿತ ಮಾತ್ರ ಮುಖ್ಯ, ಹೀಗಾಗಿ ಕಾಂಗ್ರೆಸ್ ತೊರೆದೆ ಎಂದು ಸ್ಪಷ್ಟ ಪಡಿಸಿದ್ದಾರೆ.
ನನಗೆ ಗೋಕಾಕ್ ಜನಗಳ ಹಿತರಕ್ಷಣೆ ಮುಖ್ಯ ಎಂದು ಹೇಳಿರುವ ರಮೇಶ್ ಜಾರಕಿಹೊಳಿ ಉಪ ಚುನಾವಣೆಯಲ್ಲಿ ಗೆಲುವು ಖಚಿತ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


