ರಾಜಕೀಯ

'ಹೆಣ್ಣಾಗಿ ನಾನು 1200 ಕೋಟಿ ಅನುದಾನ ತಂದಿದ್ದೇನೆ, ಗಂಡಸರಾಗಿ ನೀವು ತರೋಕೆ ಆಗಲಿಲ್ವಾ?' 

ನಾನು ಬೆಳಗಾವಿ ರಾಜಕಾರಣ ಬದಲು ಮಾಡಬಲ್ಲೆ. ಕೊಟ್ಟ ಕುದುರೆ ಏರಲು ಆಗದವನು ಇನ್ನೊಂದು ಕುದುರೆ ಏರುತ್ತೇನೆ ಅನ್ನೋನು ವೀರನೂ ಅಲ್ಲ ಶೂರನೂ ಅಲ್ಲ ಎಂದು ಅನರ್ಹರ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ.

'ಹೆಣ್ಣಾಗಿ ನಾನು 1200 ಕೋಟಿ ಅನುದಾನ ತಂದಿದ್ದೇನೆ, ಗಂಡಸರಾಗಿ ನೀವು ತರೋಕೆ ಆಗಲಿಲ್ವಾ?' 
ಲಕ್ಷ್ಮಿ ಹೆಬ್ಬಾಳ್ಕರ್
Published On :

ಬೆಳಗಾವಿ: ನಾನು ಬೆಳಗಾವಿ ರಾಜಕಾರಣ ಬದಲು ಮಾಡಬಲ್ಲೆ. ಕೊಟ್ಟ ಕುದುರೆ ಏರಲು ಆಗದವನು ಇನ್ನೊಂದು ಕುದುರೆ ಏರುತ್ತೇನೆ ಅನ್ನೋನು ವೀರನೂ ಅಲ್ಲ ಶೂರನೂ ಅಲ್ಲ ಎಂದು ಅನರ್ಹರ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ.

ಅಥಣಿ ಕ್ಷೇತ್ರದ ಕಕಮರಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರದಲ್ಲಿ ಮಾತನಾಡಿದ ಅವರು, ಹೆಣ್ಣು ಮಗಳಾಗಿ 12 ನೂರು ಕೋಟಿ ಅನುದಾನ ತಂದಿದ್ದೇನೆ ಅಂದ್ರೆ ನೀವು ಗಂಡಸರಾಗಿ ತರೋಕೆ ಆಗಲಿಲ್ವಾ? ಇನ್ನೊಬ್ಬರು ಊಟ ಮಾಡಿದ್ದಾರೆ ಅಂತ ನಾವು ಉಪವಾಸ ಇರೋದು ತಪ್ಪು. ಇನ್ನೊಬ್ಬರ ದುಡಿದು ಊಟ ಮಾಡಿದಾರೆ ಅಂದ್ರೆ ನಾವು ದುಡಿದು ಊಟ ಮಾಡಬೇಕೆನ್ನುವುದು ಗಂಡಸ್ಥನ. ಅದನ್ನು ಬಿಟ್ಟು ಮಳ್ಳನಂಗ ಸೋಗು ಹಾಕುವುದು ಕೈ ಮುಗಿಯೋದು ಮಾಡುತ್ತಾರೆ, ಅಥಣಿ ಜನರಿಗೆ ಏನೂ ಮಾಡಲು ಆಗದಿದ್ದರೂ ಬೆಳಗಾವಿ ರಾಜಕಾರಣ ಬದಲು ಮಾಡಿ ತೋರಿಸ್ತೀನಿ ಎಂದು ಸವಾಲು ಹಾಕಿದ್ದಾರೆ.

ಮಹೇಶ ಕುಮಟಳ್ಳಿ ಮಳ್ಳ ಮಳ್ಳ ಮಂಚಕ್ಕೆ ಎಷ್ಟು ಕಾಲು ಅಂದ್ರೆ ಮೂರು ಮತ್ತೊಂದು ಅನ್ನೋವಂತಹ ಮಳ್ಳ. 2013 ಮತ್ತು 2018ರ ಚುನಾವಣೆಗೆ ಟಿಕೆಟ್ ಕೊಡಿಸಲು ನಾನೂ ಸಹಾಯ ಮಾಡಿದ್ದೆ. ಒಳ್ಳೆಯವರು, ಸುಸಂಸ್ಕೃತರು ಇದ್ದಾರೆ ಅಂದುಕೊಂಡಿದ್ದೆವು. ಆದರೆ ಅವರು ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.