7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಗೆದ್ದರೆ ಮತ್ತೆ ಆಪರೇಷನ್ ಕಮಲ: ಅರವಿಂದ ಲಿಂಬಾವಳಿ ಸುಳಿವು
ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ.

ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಹದಿನೈದು ಕ್ಷೇತ್ರಗಳ ಪೈಕಿ ಹದಿನೈದೂ ಕ್ಷೇತ್ರಗಳನ್ನು ಗೆಲ್ಲುವ ಭರವಸೆಯಲ್ಲಿ ಬಿಜೆಪಿ ಇದೆ. ಆದರೆ 7ಕ್ಕಿಂತ ಕಡಿಮೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ಸರ್ಕಾರ ಪತನವಾಗಲಿದೆ.
ಸರ್ಕಾರ ಪತನವಾಗುವುದನ್ನು ತಡೆಯಲು ಮತ್ತೆ ಆಪರೇಷನ್ ಕಮಲ ನಡೆಸುವ ಸುಳಿವನ್ನು ಶಾಸಕ ಅರವಿಂದ ಲಿಂಬಾವಳಿ ನೀಡಿದ್ದಾರೆ.
ಯಶವಂತಪುರ ವಿಧಾನ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮ ಶೇಖರ್ ಪರ ಬಂಡೆಮಠದಲ್ಲಿ ಸಮುದಾಯದ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ವೇಳೆ ಜೆಡಿಎಸ್ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಫಲಿತಾಂಶ ಬಂದ ಬಳಿಕ ರಾಜಕೀಯ ಧ್ರುವೀಕರಣ ಆಗಲಿದೆ. ನಮ್ಮ ಸಂಪಕರ್ದಲ್ಲಿರುವರು ಯಾವೆಲ್ಲಾ,ಯಾರೆಲ್ಲಾ ಶಾಸಕರಿದ್ದಾರೆ? ಎಷ್ಟು ಜನ ಇದ್ದಾರೆ? ಎಂಬುದು ಚುನಾವಣೆ ಫಲಿತಾಂಶದ ಬಳಿಕ ತಿಳಿಯಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


