ಮೈತ್ರಿ ಸರ್ಕಾರದಲ್ಲಿ ತಪ್ಪು ಮಾಡಿದ್ದರೆ ರಾಜಕೀಯ ನಿವೃತ್ತಿ: ಎಚ್. ಡಿ. ಕುಮಾರಸ್ವಾಮಿ
ಮೈತ್ರಿ ಸರ್ಕಾರದಲ್ಲಿ ಏನಾದರೂ ತಪ್ಪು ಮಾಡಿದ್ದರೆ ರಾಜಕೀಯ ಜೀವನದಿಂದಲೇ ನಿವೃತ್ತಿ ಪಡೆಯುವುದಾಗಿ ಜೆಡಿಎಸ್ ಶಾಸಕಾಂಗ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ: ರಾಜಕಾರಣದಲ್ಲಿ ನಾನು ಇದುವರೆಗೂ ತಪ್ಪು ಮಾಡಿಲ್ಲ. ಮೈತ್ರಿ ಸರ್ಕಾರದಲ್ಲಿ ಏನಾದರೂ ತಪ್ಪು ಮಾಡಿದ್ದರೆ ರಾಜಕೀಯ ಜೀವನದಿಂದಲೇ ನಿವೃತ್ತಿ ಪಡೆಯುವುದಾಗಿ ಜೆಡಿಎಸ್ ಶಾಸಕಾಂಗ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಂಗಳವಾರ ಚಿಕ್ಕಬಳ್ಳಾಪುರ ವಿಧಾನ ಸಭಾ ಉಪ ಚುನಾವಣೆಯ ಪ್ರಚಾರಕ್ಕೆ ನಗರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಗರದ ಜ್ಯೂನಿಯರ್ ಕಾಲೇಜಿನಿಂದ ಬೃಹತ್ ರೋಡ್ ಶೋ ನಡೆಸಿ ಅಭ್ಯರ್ಥಿ ರಾಧಾಕೃಷ್ಣ ಪರ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೂ ಬರಲಿ , ಯಡಿಯೂರಪ್ಪ ಅವರೂ ಬರಲಿ, ಒಂದೇ ವೇದಿಕೆಯಲ್ಲಿ ಚರ್ಚಿಸೋಣ. ಮೈತ್ರಿ ಸರ್ಕಾರದಲ್ಲಿ ಹದಿನಾಲ್ಕು ತಿಂಗಳ ಅವಧಿಯಲ್ಲಿ ನಾನು ಸಣ್ಣ ತಪ್ಪು ಮಾಡಿದ್ದರೆ, ಚಿಕ್ಕಬಳ್ಳಾಪುರದ ಜನಕ್ಕೆ ಏನಾದರೂ ದ್ರೋಹ ಮಾಡಿದ್ದರೆ ಅದನ್ನು ಸಾಬೀತು ಪಡಿಸಲಿ. ಕೆ.ಸುಧಾಕರ್ ನನ್ನೆದುರು ನಿಂತು ಮಾತನಾಡಲಿ. ನಾನು ತಪ್ಪು ಮಾಡಿದ್ದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುವೆ. ಮತ್ತೆ ನಾನೆಂದೂ ನಿಮಗೆ ಮುಖ ತೋರಿಸುವುದಿಲ್ಲ ಎಂದು ಸವಾಲು ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


