ದೇವೇಂದ್ರ ಫಡ್ನವೀಸ್ ಗೆ ಪ್ರಮಾಣ ವಚನ ಭೋಧಿಸಿ ರಾಜ್ಯಪಾಲ ಕೋಶಿಯಾರ್ ತಪ್ಪು ಮಾಡಿದರು!
ಮಹಾರಾಷ್ಟ್ರದಲ್ಲಿ ಏರಿಕೆಯಾಗಿದ್ದ ರಾಷ್ಟ್ರಪತಿ ಆಳ್ವಿಕೆ ರದ್ದು ಪಡಿಸಿ ದೇವೇಂದ್ರ ಫಡ್ನವೀಸ್ ಗೆ ಸಿಎಂ ಆಗಿ ಪ್ರಮಾಣ ವಚನ ಬೋಧಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತಪ್ಪು ಮಾಡಿದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಏರಿಕೆಯಾಗಿದ್ದ ರಾಷ್ಟ್ರಪತಿ ಆಳ್ವಿಕೆ ರದ್ದು ಪಡಿಸಿ ದೇವೇಂದ್ರ ಫಡ್ನವೀಸ್ ಗೆ ಸಿಎಂ ಆಗಿ ಪ್ರಮಾಣ ವಚನ ಬೋಧಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತಪ್ಪು ಮಾಡಿದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರ ಪತಿ ಆಳ್ವಿಕೆಯನ್ನು ರದ್ದು ಪಡಿಸಿ ಪ್ರಮಾಣ ವಚನ ಬೋಧಿಸಿ ತಪ್ಪು ಮಾಡಿದ್ದಾರೆ ಎಂದು ಹೇಳಿದ್ದಾರೆ,
ಫಡ್ನವೀಸ್ ಅವರಿಗೆ ಬಹಮತ ಇದೆಯೇ ಇಲ್ಲವೇ ಎಂಬ ಬಗ್ಗೆ ರಾಜ್ಯಪಾಲರು ಮೊದಲು ತಿಳಿದುಕೊಳ್ಳಬೇಕಿತ್ತು, ಆನಂತರ ಅವರಿಗೆ ಅವಕಾಶ ನೀಡಬೇಕಿತ್ತು ಎಂದು ಹೇಳಿದ್ದಾರೆ.
ಕಾಂಗ್ರೆಸ್-ಎನ್ ಸಿಪಿ- ಶಿವಸೇನೆ ಪಕ್ಷಗಳು ಸೇರಿ ರಚಿಸುತ್ತಿರುವ ಸರ್ಕಾರ ಸಮರ್ಥವಾಗಿದ್ದು ಉತ್ತಮ ಆಡಳಿತ ನೀಡಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


