ರಾಜ್ಯಸಭಾ ಉಪ ಚುನಾವಣೆ: ಕೆ.ಸಿ. ರಾಮಮೂರ್ತಿ ಸೇರಿ ಇಬ್ಬರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಕರ್ನಾಟಕ ಮತ್ತು ಉತ್ತರ ಪ್ರದೇಶದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಉತ್ತರ ಪ್ರದೇಶದಲ್ಲಿ ಅರುಣ್ ಸಿಂಗ್ಗೆ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಕೆ.ಸಿ.ರಾಮಮೂರ್ತಿಗೆ ಟಿಕೆಟ್ ನೀಡಲಾಗಿದೆ.

ನವದೆಹಲಿ: ಕರ್ನಾಟಕ ಮತ್ತು ಉತ್ತರ ಪ್ರದೇಶದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಉತ್ತರ ಪ್ರದೇಶದಲ್ಲಿ ಅರುಣ್ ಸಿಂಗ್ಗೆ ಹಾಗೂ ಕರ್ನಾಟಕದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಕೆ.ಸಿ.ರಾಮಮೂರ್ತಿಗೆ ಟಿಕೆಟ್ ನೀಡಲಾಗಿದೆ.
ಮಾಜಿ ಸಂಸದ ಕೆ.ಸಿ.ರಾಮಮೂರ್ತಿ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದರು.
ರಾಮಮೂರ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ಕೂಡ ಘೋಷಿಸಿದ್ದು, ಡಿಸೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
ರಾಜ್ಯಸಭಾ ಸದಸ್ಯತ್ವ ತೊರೆದು ಬಿಜೆಪಿ ಸೇರಿದ ರಾಮಮೂರ್ತಿ ಅವರೇ ಅಭ್ಯರ್ಥಿಯಾಗುತ್ತಾರೆಂಬ ನಿರೀಕ್ಷೆ ಇತ್ತು. ಅದರಂತೆ ಕೇಂದ್ರ ಬಿಜೆಪಿ ಚುನಾವಣಾ ಸಮಿತಿಯು ರಾಮಮೂರ್ತಿ ಅವರನ್ನು ಬುಧವಾರ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ವಿಧಾನಸಭೆಯಲ್ಲಿ ಬಿಜೆಪಿ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ ರಾಮಮೂರ್ತಿ ಅವರ ಆಯ್ಕೆ ಸುಲಭವಾಗಿದೆ. ಲಭ್ಯ ಮಾಹಿತಿಗಳ ಪ್ರಕಾರ ಜೆಡಿಎಸ್ ಅಭ್ಯರ್ಥಿಯನ್ನು ಹಾಕುವುದಿಲ್ಲ, ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಸದ್ಯದಲ್ಲೇ ಪ್ರಕಟಿಸುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


