ಕೆಆರ್ ಪೇಟೆಯಲ್ಲಿ ಮುಂಬೈನ ಕಾಮಾಟಿಪುರ: ವಿವಾದದ ಕಿಡಿ ಹೊತ್ತಿಸಿದ ಡಿಸಿ ತಮ್ಮಣ್ಣ ಹೇಳಿಕೆ!
ಉಪ ಚುನಾವಣೆ ರಣಕಣ ದಿನಕಳೆದಂತೆ ರಂಗೇರುತ್ತಿದ್ದು, ಜಿದ್ದಿಗೆ ಬಿದ್ದವರಂತೆ ಮೂರೂ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿಯಲ್ಲಿ ಮುಳುಗಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಡಿಸಿ ತಮಣ್ಣ..

ಮಂಡ್ಯ: ಉಪ ಚುನಾವಣೆ ರಣಕಣ ದಿನಕಳೆದಂತೆ ರಂಗೇರುತ್ತಿದ್ದು, ಜಿದ್ದಿಗೆ ಬಿದ್ದವರಂತೆ ಮೂರೂ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿಯಲ್ಲಿ ಮುಳುಗಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಡಿಸಿ ತಮಣ್ಣ..
ಹೌದು.. ಮಂಡ್ಯದ ಕೆಆರ್ ಪೇಟೆ ಕ್ಷೇತ್ರದಲ್ಲಿನ ಉಪ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಸಿ ತಮಣ್ಣ ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ಸುದ್ದಿಗೆ ಗ್ರಾಸವಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ವಿರುದ್ಧ ಮಾತಿನ ಚಾಟಿ ಬೀಸೋ ಭರದಲ್ಲಿ ರೆಡ್‍ಲೈಟ್ ಏರಿಯಾದ ಪ್ರಸ್ತಾಪ ಕೆಆರ್‌ಪೇಟೆ ಉಪಕಣದಲ್ಲಿ ಕಿಡಿ ಹತ್ತಿಸಿದ್ದಾರೆ.
ಹೌದು. ಕೆರ್ ಪೇಟೆಯ ಕಿಕ್ಕೇರಿಯಲ್ಲಿ ನಿನ್ನೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಚಿವ ಡಿ.ಸಿ ತಮ್ಮಣ್ಣ ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ಮಾಡೋ ಭರದಲ್ಲಿ ರೆಡ್‍ಲೈಟ್ ಏರಿಯಾದ ಪ್ರಸ್ತಾಪ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರನ್ನು ಒಂದು ವೇಳೆ ಗೆಲ್ಲಿಸಿದರೆ, ಕೆಆರ್‌ಪೇಟೆಯನ್ನ ಮುಂಬೈಯ ರೆಡ್‍ಲೈಟ್ ಏರಿಯಾ ಕಾಮಾಟಿಪುರವನ್ನಾಗಿ ಮಾಡುತ್ತಾರೆ ಎಂದು ಹೇಳಿದ್ದಾರೆ.
ಡಿಸಿ ತಮ್ಮಣ್ಣ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


