'ಸಿದ್ದರಾಮಯ್ಯರ ಚೇಲಾ ದಿನೇಶ್ ಗುಂಡೂರಾವ್' - ಬಿ. ಸಿ. ಪಾಟೀಲ್ ಕಿಡಿ
ಉಪ ಚುನಾವಣೆಗೆ ಇನ್ನೂ ಐದು ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಖಾಡ ಮತ್ತಷ್ಟು ರಂಗೇರಿದ್ದು, ನಾಯಕರ ನಡುವಿನ ವೈಯಕ್ತಿಕ ಟೀಕೆ, ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದೆ

ಯಲ್ಲಾಪುರ: ಉಪ ಚುನಾವಣೆಗೆ ಇನ್ನೂ ಐದು ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಖಾಡ ಮತ್ತಷ್ಟು ರಂಗೇರಿದ್ದು, ನಾಯಕರ ನಡುವಿನ ವೈಯಕ್ತಿಕ ಟೀಕೆ, ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದೆ.
ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಯಲ್ಲಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿದ ಅನರ್ಹ ಶಾಸಕ ಬಿ. ಸಿ. ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಅವರ ಚೇಲಾ, ಚಮಚಾ ಎಂದು ಕಿಡಿಕಾರಿದರು.
ದಿನೇಶ್ ಗುಂಡೂರಾವ್ ಯಾರ ಕಾಲಿನ ದೂಳಿಗೆ ಸಮ ಎಂದು ಪ್ರಶ್ನಿಸಿದ ಅವರು, ದಿನೇಶ್ ಗುಂಡೂರಾವ್ ಸಿದ್ದರಾಮಯ್ಯ ಅವರಿಗೆ ಸರಿ ಸಮ ಅಂತಾ ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಗುರುವಾರ ಯಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಪರ ಪ್ರಚಾರ ನಡೆಸಿದ್ದ ದಿನೇಶ್ ಗುಂಡೂರಾವ್, ಈ ಚುನಾವಣೆ ಸ್ವಾಭಿಮಾನದ ಪ್ರಶ್ನೆ ಆಗಿದ್ದು, ಶಾಸಕರು, ರಾಜಕಾರಣಿಗಳು ಆಗುವ ಅರ್ಹತೆ ಕಳೆದುಕೊಂಡ ಅನರ್ಹರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ಪಕ್ಷಾಂತರಿಗೆ ಸೂಕ್ತ ಎಚ್ಚರಿಕೆ ನೀಡಬೇಕಿದೆ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


