ಮಾರ್ವಾಡಿಗೆ ಬಿಬಿಎಂಪಿ ಮೇಯರ್ ಪಟ್ಟ: ಬಿಜೆಪಿ ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟನೆ
ಬೆಂಗಳೂರು ನಗರದ ಮೇಯರ್ ಹುದ್ದೆಗೆ ಮಾರ್ವಾಡಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಬಿಜೆಪಿ ಕ್ರಮವನ್ನು ವಿರೋಧಿಸಿ ಕರ್ನಾಟಕ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಬೆಂಗಳೂರು ನಗರದ ಮೇಯರ್ ಹುದ್ದೆಗೆ ಮಾರ್ವಾಡಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಬಿಜೆಪಿ ಕ್ರಮವನ್ನು ವಿರೋಧಿಸಿ ಕರ್ನಾಟಕ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ಪ್ರತಿಭಟನೆ ನಡೆಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿ, ನೂತನ ಮೇಯರ್ ಗೌತಮ್ ವಿರುದ್ಧ ಘೋಷಣೆ ಕೂಗಿದ ಅವರು, ಬೆಂಗಳೂರು ನಗರ ಮಾರ್ವಾಡಿಗರ ಪಾಲಾಗಿರುವುದು ದುರದೃಷ್ಟಕರ ಎಂದರು.
ಬೆಂಗಳೂರಿನ ಮೇಯರ್ ಸ್ಥಾನವನ್ನು ಅಚ್ಚ ಕನ್ನಡಿಗನಿಗೆ ನೀಡಬೇಕು. ಆದರೆ, ಇಲ್ಲಿ ಮಾರ್ವಾಡಿಗರು, ತೆಲುಗರು, ತಮಿಳರು, ಮಲೆಯಾಳಿಗಳ ಹಾವಳಿ ಜಾಸ್ತಿಯಾಗಿದೆ. ಇದರಿಂದ ಕೇವಲ ಬೆಂಗಳೂರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಹಾನಿಯಾಗುತ್ತದೆ. ಬೇರೆಡೆಯಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರಿಗೆ ಮಣೆ ಹಾಕುವ ಬದಲಿಗೆ, ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನೊಂದೆಡೆ, ಮಾರ್ವಾಡಿಗರನ್ನು ಆಯ್ಕೆ ಮಾಡಿರುವುದರಿಂದ ಇತರ ಜಾತಿಯವರಿಗೆ ಅನ್ಯಾಯವಾಗಿದೆ ಎಂಬ ಕೂಗು ಕೂಡ ಕೇಳಿಬಂದಿತ್ತು.
ಆದರೆ, ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ರಸಗೊಬ್ಬರ ಹಾಗೂ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಎಲ್ಲದರಲ್ಲೂ ಹುಳುಕು ಹುಡುಕಬೇಡಿ. ಗೌತಮ್ ಕನ್ನಡಿಗರಲ್ಲ ಎಂದು ಹೇಳುವುದು ಸರಿಯಲ್ಲ. ಅವರನ್ನು ಬಹುಮತದಿಂದ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ. ಗೌಡರಿಗೆ ಅನ್ಯಾಯವಾಗಿದೆ, ಲಿಂಗಾಯತರಿಗೆ ಮೋಸವಾಗಿದೆ ಎಂದೆಲ್ಲ ಹೇಳುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


