ಬಳ್ಳಾರಿ ವಿಭಜಿಸಿದರೆ ಬೆಂಕಿ ಹೊತ್ತಿಉರಿಯಲಿದೆ: ಸೋಮಶೇಖರ ರೆಡ್ಡಿ ಆಕ್ರೋಶ
ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದರೆ ಇಡೀ ಹೊತ್ತಿ ಉರಿಯಲಿದೆ ಎಂದು ಮಾಜಿ ಸಚಿವ ಗಾಲಿ ಸೋಮಶೇಖರ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದರೆ ಇಡೀ ಹೊತ್ತಿ ಉರಿಯಲಿದೆ ಎಂದು ಮಾಜಿ ಸಚಿವ ಗಾಲಿ ಸೋಮಶೇಖರ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ ರೆಡ್ಡಿ, 'ಜಿಲ್ಲೆಯನ್ನು ವಿಭಜಿಸುವ ವಿಚಾರ ಸಚಿವ ಸಂಪುಟದಲ್ಲಿ ಅನುಮೋದನೆಯಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ. ಹಾಗಾಗಲು ನಾವು ಬಿಡುಲವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತೆಯೇ ಸಚಿವ ಸಂಪುಟ ಸಭೆಯನ್ನು ಮುಂದೂಡುವ ಸಾಧ್ಯತೆ ಇದ್ದು, ಸಭೆ ನಡೆದರೂ ಸಚಿವ ಬಿ.ಶ್ರೀರಾಮುಲು ಅವರು ವಿಭಜನೆಗೆ ವಿರೋಧ ವ್ಯಕ್ತಪಡಿಸಲಿದ್ದಾರೆ ಎಂದರು.
'ಬಳ್ಳಾರಿ ನಗರವೊಂದನ್ನೇ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಹೇಗಿರುತ್ತದೆ? ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕು. ನಾವು ಅಣ್ಣ ತಮ್ಮಂದಿರಂತಿದ್ದೇವೆ. ಬಳ್ಳಾರಿ ವಿಭಜನೆ ವಿರೋಧಿಸಿ ನಡೆಸಲಾಗುತ್ತಿರುವ ಬಂದ್ ಗೆ ನಮ್ಮ ಪರೋಕ್ಷ ಬೆಂಬಲವಿದೆ ಎಂದು ಹೇಳಿದ ಸೋಮಶೇಖರ್ ರೆಡ್ಡಿ, ಈ ಕುರಿತಂತೆ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರಿಗೆ ದೂರವಾಣಿ ಕರೆ ಮಾಡಿದಾಗ, ಬಹಿರಂಗವಾಗಿ ಹೇಳಿಕೆಗಳನ್ನು ಕೊಡಬಾರದು ಎಂದು ಹೇಳಿದರು.
ಅಲ್ಲದೆ ಜಿಲ್ಲೆಯ ಜನರ ಪರವಾಗಿ ನಿಂತಿದ್ದೇನೆ ಎಂದು ಸ್ಪಷ್ಟಪಡಿಸಿರುವೆ. ಯಡಿಯೂರಪ್ಪನವರೂ ನನ್ನೊಂದಿಗೆ ಚರ್ಚಿಸಿದ್ದಾರೆ ಎಂದು ಸೋಮಶೇಖರ್ ರೆಡ್ಡಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


