ತಂತಿಯ ಮೇಲಿನ ನಡಿಗೆ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಎಂ.ಪಿ.ರೇಣುಕಾಚಾರ್ಯ
ಸಿಎಂ ಬಿಎಸ್ ವೈ ಅವರ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ: ಸಿಎಂ ಬಿಎಸ್ ವೈ ಅವರ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಸಿಎಂ ಬಿಎಸ್ ಯಡಿಯೂರಪ್ಪ ಅವರ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಯಡಿಯೂರಪ್ಪ ಅವರು ನಿನ್ನೆ ದಿನ ತಂತಿ ಮೇಲೆ ನಡಿಗೆ ಎಂದು ಹೇಳಿರುವುದು ವೀರಶೈವ ಮಠಗಳು ಅನುದಾನ ಕೇಳುತ್ತಿದ್ದವು, ಅಲ್ಲದೆ ಧಾರ್ಮಿಕ ಸಂಸ್ಥೆಗಳು ಹಣ ಕೇಳುತ್ತಿದ್ದಾರೆ. ಅದಕ್ಕಾಗಿ ಅವರು ಅನುದಾನ ಖರ್ಚು ಮಾಡಬೇಕಾದರೆ ಹತ್ತು ಬಾರಿ ಯೋಚನೆ ಮಾಡಿ ಹಣ ಬಿಡುಮಾಡಬೇಕು ಎಂದಿದ್ದಾರೆ. ಈ ವಿಚಾರದಲ್ಲಿ ಅನರ್ಥ ಕಲ್ಪಿಸಬೇಡಿ ಎಂದು ಹೇಳಿದರು.
ಇನ್ನು ಇದೇ ವೇಳೆ ಬಿಜೆಪಿ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಒಂದು ರಥದ ಎರಡು ಗಾಲಿಗಳಂತೆ ಯಡಿಯೂರಪ್ಪ ಹಾಗೂ ಕೆ.ಎಸ್ ಈಶ್ವರಪ್ಪ ಅವರು. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದವರು ಬಿಜೆಪಿ ಪಕ್ಷದಲ್ಲಿ ಭಿನ್ನಮತ ಇದೆ ಎಂದು ಸುಖಾ ಸುಮ್ಮನೆ ಹೇಳುತ್ತಿದ್ದಾರೆ. ಅವರಲ್ಲಿರುವ ಗೊಂದಲಗಳನ್ನು ಬಗೆಹರಿಸಲಾಗದೆ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


