ನಮ್ಮಂತವರು ಮುಖ್ಯಮಂತ್ರಿಯಾಗಿದ್ದರೆ ರಾಜೀನಾಮೆ:ಎಚ್.ಡಿ.ರೇವಣ್ಣ ವ್ಯಂಗ್ಯ
ಜಂಬೋ ಸರ್ಕಸ್ನಲ್ಲಿ ತಂತಿ ಮೇಲೆ ನಡೆಯುತ್ತಾರೆ. ಅದೇ ರೀತಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ತಂತಿ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ.

ಹಾಸನ: ಜಂಬೋ ಸರ್ಕಸ್ನಲ್ಲಿ ತಂತಿ ಮೇಲೆ ನಡೆಯುತ್ತಾರೆ. ಅದೇ ರೀತಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ತಂತಿ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದಲ್ಲಿ ನಮ್ಮಂತಹವರು ಯಾರಾದರೂ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಧಿಕಾರದಿಂದ ಕೆಳಗೆ ಇಳಿಯುತ್ತಿದ್ದೆವು ಎಂದು ಹೇಳಿದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ನಮ್ಮ ಸಮುದಾಯದ ಸ್ವಾಮೀಜಿ ಬಗ್ಗೆ ತಲೆಕೆಡಿಸಿ ಕೊಳ್ಳುವ ಅವಶ್ಯಕತೆ ಇಲ್ಲ.ನಮ್ಮ ಸಮುದಾಯದ ಭಕ್ತರಿದ್ದಾರೆ ಅವರು ವಿಚಾರಿಸಿಕೊಳ್ಳುತ್ತಾರೆ ಎಂದು ಅವರು ಬಿ.ವೈ.ವಿಜಯೇಂದ್ರ ವಿರುದ್ಧ ಎಚ್ಚರಿಕೆ ನೀಡಿದರು.
ಬಿ.ವೈ.ಜಯೇಂದ್ರ ಇಷ್ಟು ದಿನ ವನವಾಸದಲ್ಲಿದ್ದರು. ಈಗ ಅವರ ಖಜಾನೆ ಖಾಲಿಯಾಗಿದೆ ಅದಕ್ಕೆ ಯಡಿಯೂರಪ್ಪ ಪುತ್ರ ಖಜಾನೆ ಭರ್ತಿ ಮಾಡಿಕೊಳ್ಳಲಿ. ಹಿಂದೆ ಕೇಂದ್ರ ಸರ್ಕಾರದಿಂದ ಹಾಸನ, ಮಂಡ್ಯ, ತುಮಕೂರು ಜಿಲ್ಲೆಯ ಜೆಡಿಎಸ್ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ.ಕುಮಾರಸ್ವಾಮಿ, ದೇವೇಗೌಡರ ಹಾಗೂ ನನ್ನ ದೂರವಾಣಿ ಕದ್ದಾಲಿಕೆ ಮಾಡಿದ್ದಾರೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದರು.
ನೆರೆ ಸಂತ್ರಸ್ಥರ ಪರಿಹಾರ ನೀಡಲಾಗದೆ ವಿಚಾರ ಮುಚ್ಚಿ ಹಾಕಲು ನಿರ್ಮಲಾ ನಂದ ಸ್ವಾಮೀಜಿ ದೂರವಾಣಿ ಕದ್ದಾಲಿಕೆಯ ಆರೋಪ ಮಾಡಿ ಅನಾವಶ್ಯಕ ಚರ್ಚೆ ಮಾಡುತ್ತಿದ್ದಾರೆ. ವಿಪಕ್ಷಗಳನ್ನು ಹತ್ತಿಕ್ಕಲು ಸರ್ಕಾರದಿಂದ ಸಾಧ್ಯವಿಲ್ಲ ಎಂದು ಮಾಜಿ ಸಚಿವ ರೇವಣ್ಣ ಅವರು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


