ವಿಜಯನಗರ ಜಿಲ್ಲೆ ರಚನೆ ವಿವಾದ: ಬಳ್ಳಾರಿ ಶಾಸಕರು, ಸಂಸದರ ಸಭೆ ಕರೆದ ಸಿಎಂ ಬಿಎಸ್ ವೈ
ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿಜಯನಗರ ಜಿಲ್ಲೆ ರಚನೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಳ್ಳಾರಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.

ಬೆಂಗಳೂರು: ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿಜಯನಗರ ಜಿಲ್ಲೆ ರಚನೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಳ್ಳಾರಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ನಾಳೆ ಅಂದರೆ ಅಕ್ಟೋಬರ್ 2ರಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಳ್ಳಾರಿ ಜಿಲ್ಲೆಯ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅಕ್ಟೋಬರ್ 2 ರಂದು ಮಧ್ಯಾಹ್ನ 3.30ಕ್ಕೆ ಸಭೆ ಕರೆಯಲಾಗಿದ್ದು ಅಂದು ಜಿಲ್ಲೆಯ ಬಿಜೆಪಿ,ಕಾಂಗ್ರೆಸ್ ಶಾಸಕರು,ಸಂಸದರು,ವಿಧಾನ ಪರಿಷತ್ ಸದಸ್ಯರು ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.
ವಿಜಯ ನಗರ ಜಿಲ್ಲೆ ರಚನೆ ವಿರೋಧಿಸಿರುವ ಬಳ್ಳಾರಿ ಜಿಲ್ಲೆಯ ರೆಡ್ಡಿ ಸಹೋದರರು ಹಾಗೂ ಶಾಸಕರನ್ನು ಸಮಾಧಾನಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಏಈ ಸಭೆ ಕರೆದಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಬಳ್ಳಾರಿ ಜಿಲ್ಲೆಯ ವಿಭಜನೆ ಮಾಡಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸುವ ಕುರಿತು ಹಾಲಿ ಬಿಜೆಪಿ ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ಬಳ್ಳಾರಿಯ ಬಿಜೆಪಿ ಮುಖಂಡರೇ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಮುಖವಾಗಿ ರೆಡ್ಡಿ ಸಹೋದರರು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


