ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರ ದೋಖಾ; ಸದಾನಂದ ಗೌಡ್ರ ವಿರುದ್ಧ ಕಿಡಿಕಾರಿದ ಸೂಲಿಬೆಲೆ
ಕರ್ನಾಟಕದ ಸಂಸದರು ತಮಿಳುನಾಡು ಸಂಸದರನ್ನು ನೋಡಿ ಕಲಿಬೇಕು ಎಂದು ಕಿಡಿಕಾರಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಇದೀಗ ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕರ್ನಾಟಕದ ಸಂಸದರು ತಮಿಳುನಾಡು ಸಂಸದರನ್ನು ನೋಡಿ ಕಲಿಬೇಕು ಎಂದು ಕಿಡಿಕಾರಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಇದೀಗ ಕೇಂದ್ರ ಸಚಿವ ಡಿವಿ ಸದಾನಂದ ಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದಾನಂದ ಗೌಡರು ಉತ್ತರ ಕರ್ನಾಟಕದ ಪ್ರವಾಹ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ಜನರ ದಾರಿ ತಪ್ಪಿಸುವ ಕೆಲಸ ಮಾಡುವವರ ಬಗ್ಗೆ ಕನಿಕರವಿದೆ ಎಂದು ಟ್ವೀಟ್ ಮಾಡಿದ್ದು ಈ ಟ್ವೀಟ್ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಸದಾನಂದ ಗೌಡರ ಟ್ವೀಟ್ ಗೆ ರೀ ಟ್ವೀಟ್ ಮಾಡಿರುವ ಸೂಲಿಬೆಲೆಯವರು, ಇವರು ಈಗ ಬಂದರು. ಸದಾನಂದಗೌಡರೇ ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ? ಎಂದು ಟ್ವೀಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


