ಮೋದಿಗೆ ಬೈದರೆ ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತೀವ್ರ ಕಿಡಿ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೈದರೆ ಆಕಾಶಕ್ಕೆ ಉಗುಳಿದಂತೆ, ದೇವರಿಗೆ ಬೈದಂತೆ ಎನ್ನುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೈದರೆ ಆಕಾಶಕ್ಕೆ ಉಗುಳಿದಂತೆ, ದೇವರಿಗೆ ಬೈದಂತೆ ಎನ್ನುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿ, ಮೋದಿ ಪ್ರತಾಪ್ ಸಿಂಹ ಅವರಿಗೆ ದೇವರು ಇರಬಹುದು. ಅವರು ಬೇಕಾದರೆ ಮೋದಿಗೆ ಪೂಜೆ ಮಾಡಿಕೊಳ್ಳಲಿ. ಆದರೆ ಈ ದೇವರು ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ಎಡವಿದ್ದಾರೆ. ಮೊದಲು ನಮಗೆ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಹಣ ಕೊಡಿ ಎಂದು ಒತ್ತಾಯಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಪ್ರವಾಹದಲ್ಲಿ 20 ಲಕ್ಷ ಜನ ಮನೆ ಮಠ ಕಳೆದುಕೊಂಡಿದ್ದಾರೆ. ಅದರ ಬಗ್ಗೆ ಅನುಕಂಪ ಪ್ರತಾಪ್ ಸಿಂಹ ತೋರಿಸುತ್ತಿಲ್ಲ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಅವರು ಬಕೆಟ್ ರಾಜಕೀಯ, ಭಟ್ಟಂಗಿತನ ಮಾಡುತ್ತಿರುವುದು ಖಂಡನೀಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


