ಅಕ್ರಮವಾಗಿ ಸಂಪತ್ತು ಗಳಿಸಿಲ್ಲ: ಚಾಮುಂಡೇಶ್ವರಿ ಬಳಿ ಪ್ರಮಾಣ ಮಾಡುತ್ತೇನೆ- ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ , ಸಂಪತ್ತನ್ನು ಅಕ್ರಮವಾಗಿ ಗಳಿಸಿಲ್ಲ , ಮಾಧ್ಯಮಗಳಲ್ಲಿ ಬಂದಿರುವಂತೆ ಸೌರ ವಿದ್ಯುತ್ ಸ್ಥಾವರವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆ ಎದುರಿಸಿರುವ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ , ಸಂಪತ್ತನ್ನು ಅಕ್ರಮವಾಗಿ ಗಳಿಸಿಲ್ಲ , ಮಾಧ್ಯಮಗಳಲ್ಲಿ ಬಂದಿರುವಂತೆ ಸೌರ ವಿದ್ಯುತ್ ಸ್ಥಾವರವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.
ಅಕ್ರಮವಾಗಿ ಸಂಪತ್ತು ಗಳಿಸಿಲ್ಲ ಎಂದು ಚಾಮುಂಡೇಶ್ವರಿ ದೇವಿ ಬಳಿ ಪ್ರಮಾಣ ಮಾಡುವುದಾಗಿ ಅವರು ಹೇಳಿದ್ದಾರೆ. ಒಂದು ವೇಳೆ ತನ್ನ ಸಂಪತ್ತೆಲ್ಲಾ ಅಕ್ರಮದಿಂದ ಕೂಡಿದ್ದರೆ ಅದನ್ನು ರಾಜ್ಯದ ಬೊಕ್ಕಸಕ್ಕೆ ಹಸ್ತಾಂತರಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ.
ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಸಿಬಿಐಗೆ ವರ್ಗಾಯಿಸಲಿದೆ ಎಂಬ ಪ್ರಶ್ನೆಯನ್ನು ನಿರಾಕರಿಸಿದ ಅವರು, ಇಂತಹ ವಿದ್ಯಮಾನಗಳ ಬಗ್ಗೆ ಗೊತ್ತಿಲ್ಲ ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


