ರಾಜಕೀಯ

ಸಂಸದರಿಗೆ ಪ್ರಧಾನಿ ಭೇಟಿಗೆ ಸಮಯ ಕೇಳುವ ತಾಕತ್ತಿಲ್ಲ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್

ಒಬ್ಬರು ಹುಬ್ಬಳ್ಳಿಯಲ್ಲಿ ಮತ್ತೋಬ್ಬರು ಬೆಂಗಳೂರಿನಲ್ಲಿ ಕುಳಿತಿದ್ದೀರಿ? ದೆಹಲಿಗೆ ಹೋಗಿ ಪ್ರಧಾನಿ ಭೇಟಿಗೆ ಸಮಯ ನಿಗದಿ ಮಾಡಿ.ಸಂಸದರು ತಮ್ಮ ತಾಕತ್ತು ಪ್ರದರ್ಶಿಸಲಿ.ಕೇಂದ್ರದಿಂದ 10,000 ಕೋಟಿ ಪರಿಹಾರ ತರಲಿ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಸಚಿವರಿಗೆ ಸವಾಲು ಹಾಕಿದ್ದಾರೆ.

ಸಂಸದರಿಗೆ ಪ್ರಧಾನಿ ಭೇಟಿಗೆ ಸಮಯ ಕೇಳುವ ತಾಕತ್ತಿಲ್ಲ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
Published On :

ವಿಜಯಪುರ: ಒಬ್ಬರು ಹುಬ್ಬಳ್ಳಿಯಲ್ಲಿ ಮತ್ತೋಬ್ಬರು ಬೆಂಗಳೂರಿನಲ್ಲಿ ಕುಳಿತಿದ್ದೀರಿ? ದೆಹಲಿಗೆ ಹೋಗಿ ಪ್ರಧಾನಿ ಭೇಟಿಗೆ ಸಮಯ ನಿಗದಿ ಮಾಡಿ.ಸಂಸದರು ತಮ್ಮ ತಾಕತ್ತು ಪ್ರದರ್ಶಿಸಲಿ.ಕೇಂದ್ರದಿಂದ 10,000 ಕೋಟಿ ಪರಿಹಾರ ತರಲಿ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಸಚಿವರಿಗೆ ಸವಾಲು ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನೆರೆ ಸಂತ್ರಸ್ಥರ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಟ್ಟಾ ಅಭಿಮಾನಿಗಳೂ ಸಹ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಚಕ್ರವರ್ತಿ ಸೂಲಿಬೆಲೆ ಹೇಳಿರುವುದಲ್ಲಿ ತಪ್ಪೇನಿಲ್ಲ? ನಮ್ಮ 25 ಜನ ಸಂಸದರು ಮೊದಲು ಮತದಾರರಿಗೆ ನಿಷ್ಠರಾಗಿರಲಿ. ಇದು ಪ್ರಜಾತಂತ್ರ ದೇಶ. ಕೇಂದ್ರ ಸಚಿವರು ಕೇವಲ ತಮ್ಮ ಕ್ಷೇತ್ರಗಳಿಗೆ ಸೀಮಿತರಾಗದೇ ಪ್ರವಾಹ ಪೀಡಿತರ ಸಮಸ್ಯೆಗೆ ಸ್ಪಂದಿಸಲಿ ಎಂದು ಅವರು ಸಂಸದರಿಗೆ ಮನವಿ ಮಾಡಿದರು.

ಸಚಿವರಾದ ಪ್ರಹ್ಲಾದ ಜೋಶಿ,ಸದಾನಂದಗೌಡ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಪ್ರಧಾನಿ ಅವರ ಭೇಟಿಗೆ ಸಮಯಾವಕಾ ಶ ಕೊಡಿಸಿ ಪರಿಹಾರ ಒದಗಿಸಲು ಸಹಾಯ ಮಾಡಬೇಕೆಂದು ಅವರು ಕೇಂದ್ರ ಸಚಿವರನ್ನು ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.