ರಾಜಕೀಯ

ನನಗೆ ಪ್ರತಿಪಕ್ಷ ನಾಯಕ ಸ್ಥಾನ ಬೇಕೆಂದು ಯಾರಿಗೂ ದುಂಬಾಲು ಬೀಳಲ್ಲ: ಸಿದ್ದರಾಮಯ್ಯ

ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸ್ಥಾನ ನೀಡುವಂತೆ ತಾವು ಪಕ್ಷದ ಹೈಕಮಾಂಡ್‌ಗೆ ದುಂಬಾಲು ಬೀಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನನಗೆ ಪ್ರತಿಪಕ್ಷ ನಾಯಕ ಸ್ಥಾನ ಬೇಕೆಂದು ಯಾರಿಗೂ ದುಂಬಾಲು ಬೀಳಲ್ಲ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸ್ಥಾನ ನೀಡುವಂತೆ ತಾವು ಪಕ್ಷದ ಹೈಕಮಾಂಡ್‌ಗೆ ದುಂಬಾಲು ಬೀಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ನನ್ನ ಅಗತ್ಯವಿದ್ದರೆ ವಿಪಕ್ಷ ನಾಯಕನ ಸ್ಥಾನವನ್ನು ನೀಡುತ್ತಾರೆ. ಪಕ್ಷಕ್ಕೆ ನನ್ನ ಅಗತ್ಯವಿಲ್ಲದಿದ್ದರೆ ಬೇರೆಯವರಿಗೆ ಪ್ರತಿಪಕ್ಷ ನಾಯಕ ಸ್ಥಾನವನ್ನು ನೀಡುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೇ ವಿಧಾನಸಭೆ ವಿರೋಧ ಪಕ್ಷದ ನಾಯಕರು ಆಗಿರಬೇಕು. ಎರಡೂ ಹುದ್ದೆಗಳನ್ನು ಒಬ್ಬರೇ ಇದ್ದರೆ ಸೂಕ್ತ ಎಂದು ನನ್ನ ಸ್ಪಷ್ಟ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.