ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸಿ.ಟಿ.ರವಿ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ. ಚುನಾವಣೆಗೂ ಮುನ್ನವೇ ಬಿ.ಎಸ್. ಯಡಿಯೂರಪ್ಪ ಅವರನ್ನು‌ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು ಎಂದು‌ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸಿ.ಟಿ.ರವಿ
ಸಿಟಿ ರವಿ (ಸಂಗ್ರಹ ಚಿತ್ರ)
Published On :

ರಾಮನಗರ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ. ಚುನಾವಣೆಗೂ ಮುನ್ನವೇ ಬಿ.ಎಸ್. ಯಡಿಯೂರಪ್ಪ ಅವರನ್ನು‌ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು ಎಂದು‌ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ರಾಮನಗರದಲ್ಲಿ‌ ಪ್ರವಾಸೋದ್ಯಮ‌ ಇಲಾಖೆ ವತಿಯಿಂದ ಅಯೋಜಿಸಿರುವ ಆಹಾರ ಮೇಳಕ್ಕೆ ಸೋಮವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ 75 ವರ್ಷ ಆಗಿರುವವರಿಗೆ ಅಧಿಕಾರ ಕೊಟ್ಟಿರುವುದು ಯಡಿಯೂರಪ್ಪನವರಿಗೆ ಮಾತ್ರ. ಚುನಾವಣೆಯ ಪೂರ್ವದಲ್ಲಿಯೇ ಅವರೇ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೆವು.

ಅವರನ್ನು ನಾವೆಲ್ಲಾ ಸರ್ವಾನುಮತದಿಂದ ಆಯ್ಕೆ ಮಾಡಿದ್ದೆವು. ಸರ್ಕಾರದ ಅವಧಿ ಮುಗಿಯುವವರೆಗೂ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.