ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು: ಸಿದ್ದರಾಮಯ್ಯ ಲೇವಡಿ
ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಗುರುವಾರ ನೆರೆ ಪರಿಸ್ಥಿತಿ ಕುರಿತ ಚರ್ಚೆ ವೇಳೆ ಮಾತನಾಡಿದ ಅವರು, 'ರಾಜ್ಯದಲ್ಲಿ ಹಿಂದೆಂದೂ ಕಾಣದ ಪ್ರವಾಹ ಪರಿಸ್ಥಿತಿ ಉಂಟಾಗಿದರೂ ಸಮಪರ್ಕವಾದ ಪರಿಹಾರ ನೀಡದೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನಾಯ ಎಸಗಿದ್ದು, 56 ಇಂಚು ಎದೆವುಳ್ಳ ಪ್ರಧಾನಿಗೆ ತಾಯಿ ಹೃದಯ ಇಲ್ಲವಲ್ಲ ಎಂಬುದೇ ನೋವಿನ ಸಂಗತಿ.ರಾಜ್ಯಕ್ಕೆ ಬಂದು ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.
'ಪ್ರಧಾನಿಯವರು 56 ಇಂಚು ಎದೆ ಇದೆ ಎಂದು ಹೇಳಿಕೊಳ್ಳುತ್ತಾರೆ. ಪೈಲ್ವಾನ್, ಬಾಡಿಬಿಲ್ಡರ್‌ಗಳಿಗೂ ಎದೆ ಇರುತ್ತದೆ. ಆದರೆ, ಆ ಎದೆಯಲ್ಲಿ ತಾಯಿ ಹೃದಯ ಇಲ್ಲವಲ್ಲ ಎಂಬುದೇ ಬೇಸರ. ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಿಂದೆಂದೂ ಕಾಣದ ನೆರೆ ಎದುರಾದರೂ ಸಮರ್ಪಕವಾದ ಪರಿಹಾರ ನೀಡದೆ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ. ಪ್ರಧಾನಿಗಳು ವಿದೇಶ ಪ್ರವಾಸ ಕೈಗೊಳ್ಳಲು ಅಭ್ಯಂತರ ಇಲ್ಲ. ಆದರೆ, ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದು ಗೊತ್ತಿರಬೇಕು. ವಿದೇಶಕ್ಕೆ ಹೋಗದಿದ್ದರೆ ಪ್ರಳಯವಾಗುವುದಿಲ್ಲ. ಅದನ್ನು ಮುಂದೂಡಬಹುದು. ಪ್ರವಾಹದಿಂದ ಲಕ್ಷಾಂತರ ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಈ ಬಗ್ಗೆ ಗಮನ ಹರಿಸಬೇಕಿತ್ತಲ್ಲವೇ?' ಎಂದು ಅವರು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


