ಸುಮಲತಾ ಹೆಸರು ಹೇಳಿಕೊಂಡು ರಾಜಕೀಯ ಮಾಡುವ ದುಸ್ತಿತಿ ಬಂದಿಲ್ಲ: ಶಿವರಾಮೇಗೌಡ
ಸುಮಲತಾ ಹೆಸರೇಳಿಕೊಂಡು ರಾಜಕೀಯ ಮಾಡುವ ದುಸ್ಥಿತಿ ನನಗೆ ಬಂದಿಲ್ಲ. ಅವರು ರಾಜಕೀಯಕ್ಕೆ ಬರುವುದಕ್ಕೂ ಮುಂಚೆ ನಾನು ಚೆನ್ನಾಗಿ ರಾಜಕೀಯ ಮಾಡಿದ್ದೇವೆ ಎಂದು ಮಾಜಿ ಸಂಸದ ಶಾಸಕ ಶಿವರಾಮೇಗೌಡ ಅವರು ಸಂಸದೆ ಸುಮಲತಾ ಅವರಿಗೆ ತಿರುಗೇಟು ನೀಡಿದ್ದಾರೆ.

ಮಂಡ್ಯ: ಸುಮಲತಾ ಹೆಸರೇಳಿಕೊಂಡು ರಾಜಕೀಯ ಮಾಡುವ ದುಸ್ಥಿತಿ ನನಗೆ ಬಂದಿಲ್ಲ. ಅವರು ರಾಜಕೀಯಕ್ಕೆ ಬರುವುದಕ್ಕೂ ಮುಂಚೆ ನಾನು ಚೆನ್ನಾಗಿ ರಾಜಕೀಯ ಮಾಡಿದ್ದೇವೆ ಎಂದು ಮಾಜಿ ಸಂಸದ ಶಾಸಕ ಶಿವರಾಮೇಗೌಡ ಅವರು ಸಂಸದೆ ಸುಮಲತಾ ಅವರಿಗೆ ತಿರುಗೇಟು ನೀಡಿದ್ದಾರೆ.
ನಾಗಮಂಗಲದಲ್ಲಿ ಮಾತನಾಡಿದ ಅವರು, ರೈತರು ಸಮಸ್ಯೆ ಹೇಳಿಕೊಂಡಾಗ ಜನರ ಮುಂದೆ ವಿಚಾರ ಇಟ್ಟಿದ್ದೇನೆ. ಸುಮಲತಾ ಅವರ ವೈಯಕ್ತಿಕ ವಿಚಾರ ಹೇಳಿಲ್ಲ. ಒಂದು ವೇಳೆ ಹೇಳಿದ್ದರೆ ಕ್ರಮ ತೆಗೆದುಕೊಳ್ಳಲಿ ಎಂದು ಅವರು ಸಂಸದೆ ಸುಮಲತಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುಮಲತಾ ಅವ್ರು ಭಾಷಣ ಮಾಡದೆ, ಗುದ್ದಲಿ ತೆಗೆದುಕೊಂಡು ಅಗೆಯುತ್ತಿದ್ದಾರಾ? ಎಂದು ಪ್ರಶ್ನೆ ಮಾಡಿದ ಅವರು, ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಹಿಂದಿನ ಸರ್ಕಾರವೇ ಕಾರಣ ಎಂಬ ಸುಮಲತಾ ಆರೋಪ ವಿಚಾರ ಬಗ್ಗೆ ಪ್ರತಿಕ್ರಿಯಿಸಿದರು.
ನಮ್ಮಿಂದ ತಪ್ಪಾಗಿದೆ. ನೀವು ಅಧಿಕಾರದಲ್ಲಿದ್ದೀರಿ ಸಮಸ್ಯೆ ಬಗೆಹರಿಸಿ. ಅದನ್ನು ಬಿಟ್ಟು ಕೆಸರೆರಚಾಡಿ ಮಾಡಿದರೆ ಪ್ರಯೋಜನವಿಲ್ಲ. ಸಂಸದರೂ ತಮ್ಮ ಕೆಲಸ ಮಾಡಬೇಕು, ಶಾಸಕರೂ ತಮ್ಮ ಕೆಲಸ ಮಾಡಬೇಕು ಎಂದು ಅವರು ಸುಮಾಲತಾಗೆ ತಿರುಗೇಟು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


