ರಾಜಕೀಯ

ಮಹಾ ಚುನಾವಣೆ: ಕನ್ನಡಿಗರು, ಲಿಂಗಾಯತರನ್ನು ಸೆಳೆಯಲು ಯಡಿಯೂರಪ್ಪ ಪ್ರಚಾರ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಮಹಾ ಚುನಾವಣೆ: ಕನ್ನಡಿಗರು, ಲಿಂಗಾಯತರನ್ನು ಸೆಳೆಯಲು ಯಡಿಯೂರಪ್ಪ ಪ್ರಚಾರ
ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಸಿಎಂ ಯಡಿಯೂರಪ್ಪ ಅವರು ಪಕ್ಷದ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿ, ಅಲ್ಲಿನ ಲಿಂಗಾಯತ ಹಾಗೂ ಕನ್ನಡಿಗರ ಮತದಾರರನ್ನು ಸೆಳೆಯಲಿದ್ದಾರೆ. 

ಚುನಾವಣಾ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರು ನಾಳೆ ಮಹಾರಾಷ್ಟ್ರಕ್ಕೆ ಹೊರಡಲಿದ್ದಾರೆ. ಬುಧವಾರ ಅವರು ಸಾಂಗ್ಲಿ, ಸೋಲಾಪುರ, ಅಕ್ಕೋಲಕೊಟ್, ಚಾಕೂರು, ಲಾತೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ತಿಳಿಸಿದೆ.

ಗುರುವಾರ ಕಲಬುರಗಿಯ ಗಂಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ರಾಜ್ಯ ರಾಜಧಾನಿಗೆ ಹಿಂದಿರುಗಲಿದ್ದಾರೆ.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮತ್ತು ಲಿಂಗಯತರನ್ನು ಸೆಳೆಯಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಮಹಾರಾಷ್ಟ್ರದಲ್ಲಿ ಪ್ರಚಾರಕ್ಕೆ ಮತ್ತೋರ್ವ ಲಿಂಗಾಯತ ನಾಯಕರಾದ ಉಪ ಮುಖ್ಯಮಂತ್ರಿ ಲಕ್ಷ್ಣಣ್ ಸವದಿ ಅವರನ್ನೂ ಕಳುಹಿಸಲಿದೆ. ಅದೇ ರೀತಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರನ್ನೂ ಮಹಾ ಪ್ರಚಾರಕ್ಕೆ ಇಳಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.