ಬಿಜೆಪಿ ಕಚೇರಿಗೆ ಲಿಂಗಾಯತರಿಗೆ ನಿರ್ಬಂಧ: ಬಿಜೆಪಿ ನಾಯಕರ ವಿರುದ್ಧ ಎಂ ಬಿ ಪಾಟೀಲ್ ಆಕ್ರೋಶ
ಲಿಂಗಾಯತರಾಗಲೀ ಅಥವ ಇನ್ಯಾವುದೇ ಸಮುದಾಯದವರಾಗಲೀ ಕಚೇರಿಗೆ ಬರಬೇಡಿ ಎಂದು ಹೇಳುವುದು ಸರಿಯಲ್ಲ ಎನ್ನುವ ಮೂಲಕ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿದ್ದಾರೆ.

ಬೆಂಗಳೂರು: ಲಿಂಗಾಯತರಾಗಲೀ ಅಥವ ಇನ್ಯಾವುದೇ ಸಮುದಾಯದವರಾಗಲೀ ಕಚೇರಿಗೆ ಬರಬೇಡಿ ಎಂದು ಹೇಳುವುದು ಸರಿಯಲ್ಲ ಎನ್ನುವ ಮೂಲಕ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿದ್ದಾರೆ.
ಬಿಜೆಪಿ ಕಚೇರಿಗೆ ಲಿಂಗಾಯತ ಸಮುದಾಯದ ಕಾರ್ಯಕರ್ತರ ಪ್ರವೇಶ ನಿರ್ಬಂಧ ವಿಚಾರವಾಗಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತ ಕಾರ್ಯಕರ್ತರಿಗೆ ಬಿಜೆಪಿ ಕಚೇರಿ ಪ್ರವೇಶ ನಿಷಿದ್ಧ ವಿಚಾರ ತಮಗೆ ಮಾಧ್ಯಮಗಳ ಮೂಲಕ ತಿಳಿದುಬಂದಿದ್ದು,ಇದು ಎಷ್ಟರಮಟ್ಟಿಗೆ ಸರಿ ಎಂಬುದು ತಮ್ಮ ಗಮನಕ್ಕೆ ಇನ್ನೂ ಬಂದಿಲ್ಲ. ಒಂದು ವೇಳೆ ಇದು ಸತ್ಯ ಆಗಿದ್ದರೆ ಈ ಕ್ರಮ ದುರದೃಷ್ಟಕರ.ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಹಳ ಗಂಭೀರವಾಗಿ ವಿಚಾರ ಮಾಡಬೇಕಾಗುತ್ತದೆ.ಯಾವುದೇ ಸಮುದಾಯದವರನ್ನು ಬರಬೇಡಿ ಎಂದು ಹೇಳುವುದು ತಪ್ಪು ಎಂದು ಹೇಳಿದರು.
ಲಿಂಗಾಯತರ ಬೆಂಬಲ ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಸಿಕ್ಕಿದೆ. ಆದರೂ ಸಮುದಾಯಕ್ಕೆ ಈ ರೀತಿ ಅಪಮಾನ ಮಾಡಿರುವುದು ಸರಿಯಲ್ಲ. ಈ ಬಗ್ಗೆ ಯಡಿಯೂರಪ್ಪ ಆದಿಯಾಗಿ ಎಲ್ಲರೂ ವಿಚಾರ ಮಾಡಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


