ಉಪಚುನಾವಣೆಗೆ ಮುನ್ನ ಕಾಂಗ್ರೆಸ್ ಗೆ ಶಾಕ್! ರಾಜ್ಯಸಭಾ ಸ್ಥಾನಕ್ಕೆ ಕೆಸಿ ರಾಮಮೂರ್ತಿ ರಾಜೀನಾಮೆ
ರಾಜ್ಯದಲ್ಲಿ ಸಧ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲು ಕೆಲ ದಿನಗಳಿರುವಂತೇ ಕಾಂಗ್ರೆಸ್ ಗೆ ಇನ್ನೊಮ್ಮೆ ಆಘಾತವಾಗಿದೆ. ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯತ್ವಕ್ಕೆ ಕೆ.ಸಿ.ರಾಮಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಸಹ ರಾಜೀನಾಮೆ ಸಲ್ಲಿಸಿದ್ದಾರೆ.

ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾಕ್ಷರಾದ ವೆಂಕಯ್ಯ ನಾಯ್ಡು ಅವರಿಗೆ ರಾಮಸ್ವಾಮಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮೂಲಗಳು ಹೇಳಿದಂತೆ ಅವರು ಶೀಘ್ರವೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಆದರೆ ನಾನು ಬೇರೆ ಕೆಲ ಕಾರಣಕ್ಕಾಗಿ ಬಿಜೆಪಿ ಮುಖಂಡರನ್ನು ಭೇಟಿಯಾಗಿದ್ದು ಸತ್ಯ. ಆದರೆ ರಾಜೀನಾಮೆಗೂ ಅದಕ್ಕೂ ಸಂಬಂಧವಿಲ್ಲ ಎಂದು ರಾಮಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿಯಾಗಿರುವ ರಾಮಮೂರ್ತಿ 2016ರಲ್ಲಿ ರಾಜ್ಯಸಭೆಗೆ ಕಾಂಗ್ರೆಸ್ ಸದಸ್ಯರಾಗಿ ರಾಜ್ಯದಿಂದ ಆಯ್ಕೆಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.