ಸಿಎಂ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಕಾಂಗ್ರೆಸ್ ಶಾಸಕ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟವನ್ನು ಚಿಕ್ಕವನಿಂದ ನೋಡಿಕೊಂಡು ಬಂದಿದ್ದೆನೆ. ಅವರು ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ನೇರ, ನಿಷ್ಠುರವಾದಿ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಹಾಡಿ ಹೊಗಳಿದ್ದಾರೆ.

ತುಮಕೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟವನ್ನು ಚಿಕ್ಕವನಿಂದ ನೋಡಿಕೊಂಡು ಬಂದಿದ್ದೆನೆ. ಅವರು ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ನೇರ, ನಿಷ್ಠುರವಾದಿ ಎಂದು ಕುಣಿಗಲ್ ಕಾಂಗ್ರೆಸ್ ಶಾಸಕ ರಂಗನಾಥ್ ಹಾಡಿ ಹೊಗಳಿದ್ದಾರೆ.
ಯಡಿಯೂರಪ್ಪ ಅವರು ರೈತರ ಪರ ಮಾಡಿದ ಹೋರಾಟ ನೋಡಿದ್ದೆ. ಕುಣಿಗಲ್ ತಾಲೂಕಿನ ಮೇಲೆ ಅವರ ಆಶೀರ್ವಾದ ಇರಲಿ. ರಾಜಕೀಯ ಎಂಬುದು ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ಅಭಿವೃದ್ಧಿಯಲ್ಲಿ ರಾಜಕೀಯ ಇರಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈತ್ರಿ ಸರ್ಕಾರದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು 617ಕೋಟಿ ರೂ ಲಿಂಕಿಂಗ್ ಕೆನಾಲ್ ಗಾಗಿ ಅನುದಾನ ಬಿಡುಗಡೆ ಮಾಡಿದರು. ಆದರೆ, ತುಮಕೂರಿನ ನಾಯಕರು ಅದನ್ನು ತಡೆಹಿಡಿದಿದ್ದಾರೆ. ಮುಖ್ಯಮಂತ್ರಿಗಳು ಈ ವಿಷಯವನ್ನು ಗಮನಿಸಬೇಕು ಎಂದು ಪರೋಕ್ಷವಾಗಿ ಸಂಸದ ಜಿ.ಬಸವರಾಜು ಅವರಿಗೆ ಟಾಂಗ್ ನೀಡಿದರು.
ಸಂಸದ ಜಿ.ಎಸ್.ಬಸವರಾಜು ಅವರೇ, ಯಾವ ಕಾರಣಕ್ಕಾಗಿ ನೀವು ಲಿಂಕಿಂಗ್ ಕೆನಾಲ್ ತಡೆದಿದ್ದೀರಿ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


