ರಾಜಕೀಯ

ಕಾಡಿ ಬೇಡಿ ವಿರೋಧಪಕ್ಷ ನಾಯಕರಾದ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟರೂ ಅಚ್ಚರಿಯಿಲ್ಲ: ರೇಣುಕಾಚಾರ್ಯ

ಕಾಡಿ ಬೇಡಿ ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರು ಕಾಂಗ್ರೆಸ್‌ ಪಕ್ಷ ತೊರೆದರೂ ಆಶ್ಚರ್ಯವಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.

ಕಾಡಿ ಬೇಡಿ ವಿರೋಧಪಕ್ಷ ನಾಯಕರಾದ ಸಿದ್ದರಾಮಯ್ಯ ಕಾಂಗ್ರೆಸ್ ಬಿಟ್ಟರೂ ಅಚ್ಚರಿಯಿಲ್ಲ: ರೇಣುಕಾಚಾರ್ಯ
ಎಂ.ಪಿ. ರೇಣುಕಾಚಾರ್ಯ
Published On :

ದಾವಣಗೆರೆ: ಕಾಡಿ ಬೇಡಿ ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರು ಕಾಂಗ್ರೆಸ್‌ ಪಕ್ಷ ತೊರೆದರೂ ಆಶ್ಚರ್ಯವಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.

ಹೊನ್ನಾಳಿ ತಾಲ್ಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡಿ ಬೇಡಿ ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಗೋಲಿ ಆಡುವವರು ಎಂದು ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು. 

ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು,  ನಿಮ್ಮಂತೆ ಮತಾಂಧ ಟಿಪ್ಪು ಜಯಂತಿ ನಾವು ಮಾಡುವುದಿಲ್ಲ. ಮೊದಲು ಅವರು ಸಾವರ್ಕರ್ ಬಗ್ಗೆ ಇತಿಹಾಸ ಓದಿ ತಿಳಿದುಕೊಳ್ಳಲಿ ಎಂದರು.
ಕೂಡಲೇ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆ ಹಿಂಪಡೆದು, ಕ್ಷಮೆ ಯಾಚಿಸುವಂತೆ ಅವರು ಒತ್ತಾಯಿಸಿದರು.

ಗಾಂಧೀಜಿಯವರ 150 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಕಳೆದ ಏಳು ದಿನಗಳಿಂದ ತಾಲೂಕಿನಾದ್ಯಂತ ರೇಣುಕಾಚಾರ್ಯ ಗಾಂಧಿ ಸಂಕಲ್ಪಯಾತ್ರೆ ಕೈಗೊಂಡಿದ್ದಾರೆ. 

ರೇಣುಕಾಚಾರ್ಯ ಅವರ ಜೊತೆಗೆ ಎಂ.ಪಿ. ಸಿದ್ದೇಶ್ವರ್ ಸೇರಿ ನೂರಾರು ಕಾರ್ಯಕರ್ತರು ಪಾದಯಾತ್ರೆಗೆ ಕೈಜೋಡಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.