ರಾಜಕೀಯ

ಸಾವು ಬಯಸಿದವರ ಕ್ಷಮಿಸಿಬಿಡು ತಂದೆಯೇ: ಸಚಿವ ಶ್ರೀರಾಮುಗೆ ಸಿದ್ದು ಟಾಂಗ್ 

ನನ್ನ ಸಾವು ಬಯಸಿದವರ ಕ್ಷಮಿಸಿಬಿಡು ತಂದೆಯೇ ಎಂದು ಹೇಳುವ ಮೂಲಕ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟಾಂಗ್ ನೀಡಿದ್ದಾರೆ.

ಸಾವು ಬಯಸಿದವರ ಕ್ಷಮಿಸಿಬಿಡು ತಂದೆಯೇ: ಸಚಿವ ಶ್ರೀರಾಮುಗೆ ಸಿದ್ದು ಟಾಂಗ್ 
ಸಿದ್ದರಾಮಯ್ಯ
Published On :

ಬೆಂಗಳೂರು: ನನ್ನ ಸಾವು ಬಯಸಿದವರ ಕ್ಷಮಿಸಿಬಿಡು ತಂದೆಯೇ ಎಂದು ಹೇಳುವ ಮೂಲಕ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟಾಂಗ್ ನೀಡಿದ್ದಾರೆ. 

ಈ ಹಿಂದೆ ಹೇಳಿಕೆ ನೀಡಿದ್ದ ಶ್ರೀರಾಮುಲು ಅವರು ವೀರ ಸಾವರ್ಕರ್ ಹಾಗೂ ನಾಥೂರಾಮ್ ಗೋಡ್ಸೆ ಬಗ್ಗೆ ಹಗುರವಾಗಿ ಮಾತನಾಡುವ ಸಿದ್ದರಾಮಯ್ಯ ಅವರು ಭೂಮಿ ಮೇಲೆ ಇರಬಾರದು. ಸಿದ್ದರಾಮಯ್ಯ ಅವರಿಗೆ ನಾಲಿಗೆ ಮೇಲೆ ಹಿಡಿತವಿಲ್ಲ. ಬಾಯಿ ಚಪಲಕ್ಕೆ ಅವರು ಮಾತನಾಡುತ್ತಾರೆ. ಸಾವರ್ಕರ್ ಬಗ್ಗೆ ಓದಿಕೊಂಡು ಮಾತನಾಡಲಿ ಎಂದು ಹೇಳಿದ್ದರು. 

ಈ ಹೇಳಿಕೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟಾಂಗ್ ನೀಡಿರುವ ಸಿದ್ದರಾಮಯ್ಯ, ಸಿದ್ದರಾಮಯ್ಯ ಭೂಮಿ ಮೇಲೆ ಇರಬಾರದು ಎಂದು ಶ್ರೀರಾಮುಲು ಹೇಳಿದ್ದಾರೆ. ತನ್ನ ಸಾವು ಬಯಸಿದವರಿಗೆ ಏಸುಕ್ರಿಸ್ತ ಹೇಳಿದ್ದನ್ನೇ ಶ್ರೀರಾಮುಲು ಅವರಿಗೆ ಹೇಳುತ್ತೇನೆ. ಅವರನ್ನು ಕ್ಷಮಿಸಿಬಿಡು ತಂದೆಯೇ, ಅವರೇನು ಮಾಡುತ್ತಿದ್ದಾರೆನ್ನುವುದು ಅವರಿಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. 

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಅವರು ಸಾವರ್ಕರ್ ಅವರಿಗೆ ಭಾರತ ರತ್ನ ಆಮೇಲೆ ಕೊಡುವಿರಂತೆ ಮೊದಲು ಸಾಮಾಜಿಕ ಸೇವೆಗಾಗಿ ತಮ್ಮ ಬದುಕನ್ನೇ ತೇದು ಲಿಂಗೈಕ್ಯರಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ ಎಂದು ಟ್ವೀಟ್ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.