ಸಿದ್ದು ನಿವಾಸದ ನಾಮಫಲಕ ತೆಗೆದ ಅಧಿಕಾರಿಗಳು: ಕಾವೇರಿಗಾಗಿ ಹಾಲಿ - ಮಾಜಿ ಸಿಎಂಗಳ ಪೈಪೋಟಿ
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇನ್ನೂ ತೆರವುಗೊಳಿಸಿಲ್ಲ. ಹೀಗಾಗಿ ಸರ್ಕಾರದ ಸೂಚನೆ ಮೇರೆಗೆ ಡಿಪಿಎಆರ್ ಅಧಿಕಾರಿಗಳು ಕಾವೇರಿ ನಿವಾಸದ ಮುಂದೆ ತೂಗುಹಾಕಿದ್ದ ಸಿದ್ದರಾಮಯ್ಯ ಹೆಸರಿನ ನಾಮಫಲಕವನ್ನು ಕಿತ್ತುಹಾಕಿದ್ದು, ಆ ಮೂಲಕ ಆದಷ್ಟುಬೇಗ ನಿವಾಸ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇನ್ನೂ ತೆರವುಗೊಳಿಸಿಲ್ಲ. ಹೀಗಾಗಿ ಸರ್ಕಾರದ ಸೂಚನೆ ಮೇರೆಗೆ ಡಿಪಿಎಆರ್ ಅಧಿಕಾರಿಗಳು ಕಾವೇರಿ ನಿವಾಸದ ಮುಂದೆ ತೂಗುಹಾಕಿದ್ದ ಸಿದ್ದರಾಮಯ್ಯ ಹೆಸರಿನ ನಾಮಫಲಕವನ್ನು ಕಿತ್ತುಹಾಕಿದ್ದು, ಆ ಮೂಲಕ ಆದಷ್ಟುಬೇಗ ನಿವಾಸ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಇನ್ನೂ ಮೂರ್ನಾಲ್ಕು ದಿನಗಳೊಳಗೆ ಕಾವೇರಿ ನಿವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ವಾಸ್ತವ್ಯಕ್ಕೆ ಬಿಟ್ಟುಕೊಡಬೇಕು. ನಿಗದಿತ ಸಮಯದೊಳಗೆ ನಿವಾಸ ಖಾಲಿ ಮಾಡದಿದ್ದಲ್ಲಿ ನೀರಿನ ಸಂಪರ್ಕ ಖಡಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಕಾವೇರಿ ನಿವಾಸವನ್ನು ವಿರೋಧ ಪಕ್ಷದ ನಾಯಕನಾಗಿರುವ ತಮಗೆ ಬಿಟ್ಟುಕೊಡುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ ಈ ನಿವಾಸವನ್ನು ತಮ್ಮಲ್ಲಿ ಉಳಿಸಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿರುವುದರಿಂದ ಹಾಲಿ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಯ ನಡುವೆ ಪೈಪೋಟಿ ಆರಂಭಗೊಂಡಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


