ದನ, ಕುರಿ ಮಾರಾಟದಲ್ಲಿ ಸಿದ್ದರಾಮಯ್ಯ ನಿಪುಣ: ಬಿ.ಸಿ.ಪಾಟೀಲ್ ತಿರುಗೇಟು
ದನ, ಕುರಿ ಮಾರಾಟದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಿಪುಣ. ಅವರಿಗಿಂತ ಚೆನ್ನಾಗಿ ಬಲ್ಲವರು ಯಾರೂ ಇಲ್ಲ ಎಂದು ಹೇಳುವ ಮೂಲಕ ಹಿರೇಕೆರೂರು ಅನರ್ಹ ಶಾಸಕ ಬಿ.ಸಿ.ಪಾಟೀಲ್

ಮೈಸೂರು: ದನ, ಕುರಿ ಮಾರಾಟದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಿಪುಣ. ಅವರಿಗಿಂತ ಚೆನ್ನಾಗಿ ಬಲ್ಲವರು ಯಾರೂ ಇಲ್ಲ ಎಂದು ಹೇಳುವ ಮೂಲಕ ಹಿರೇಕೆರೂರು ಅನರ್ಹ ಶಾಸಕ ಬಿ.ಸಿ.ಪಾಟೀಲ್, ಶಾಸಕರನ್ನು ದನ, ಕುರಿ, ಕೋಳಿಗಳಂತೆ ಬಿಜೆಪಿಯವರು ಖರೀದಿ ಮಾಡಿದ್ದಾರೆ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮನ್ನು ಖರೀದಿಸಲು ನಾವು ದನ, ಕುರಿ, ಕೋಳಿಗಳಲ್ಲ. ಸಿದ್ದರಾಮಯ್ಯ ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್ ನಲ್ಲಿ ನಮ್ಮನ್ನು ಹೇಗೆ ನಡೆಸಿಕೊಂಡರು ಎನ್ನುವುದರ ಬಗ್ಗೆ ಮೊದಲು ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಾಗಿದ್ದರೆ 14 ಮಂದಿ ಪಕ್ಷದಿಂದ ಹೊರಬರುವ ಸಂದರ್ಭವೇ ಬರುತ್ತಿರಲಿಲ್ಲ ಎಂದರು.
ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಒಂದೂ ದಿನವೂ ಸರಿಯಾಗಿ ನಡೆದುಕೊಳ್ಳಲಿಲ್ಲ. ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ತಮ್ಮ ಕುಟುಂಬಕ್ಕೆ ಮಾತ್ರ ಸೀಮಿತರಾದರು. ಪಕ್ಷದಲ್ಲಿ ನಮ್ಮ ಕಷ್ಟ - ಸುಖ ಕೇಳುವುದಕ್ಕೆ ಯಾರೂ ಇರಲಿಲ್ಲ. ಹಾಗಾಗಿಯೇ ನಾವೆಲ್ಲ ದೃಢ ತೀರ್ಮಾನ ಮಾಡಬೇಕಾಯಿತು. ಈಗಲೂ ಸಹ ನಾವೆಲ್ಲಾ ಒಟ್ಟಾಗಿಯೇ ಇದ್ದೇವೆ. ಪರಿಸ್ಥಿತಿಯನ್ನು ಒಟ್ಟಾಗಿಯೇ ಎದುರಿಸುತ್ತೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


