ಡಿಕೆಶಿ ಜೈಲಿನಿಂದ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ; ಶ್ರೀರಾಮುಲು
‘ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲು ಸೇರಿದ್ದ ಶಾಸಕ ಡಿ.ಕೆ. ಅವರು ಶೀಘ್ರ ಬಿಡುಗಡೆಯಾಗಲಿ ಎಂದು ನಾನೂ ದೇವರಲ್ಲಿ ಪ್ರಾರ್ಥಿಸಿದ್ದೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಚಿತ್ರದುರ್ಗ: ‘ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲು ಸೇರಿದ್ದ ಶಾಸಕ ಡಿ.ಕೆ. ಅವರು ಶೀಘ್ರ ಬಿಡುಗಡೆಯಾಗಲಿ ಎಂದು ನಾನೂ ದೇವರಲ್ಲಿ ಪ್ರಾರ್ಥಿಸಿದ್ದೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಂದು ಡಿ.ಕೆ. ಶಿವಕುಮಾರ್ ಮತ್ತು ಅವರ ಕುಟುಂಬಕ್ಕೆ ಕೆಟ್ಟದನ್ನು ಬಯಸಿರಲಿಲ್ಲ. ನಾವು ಶತ್ರುಗಳಿಗೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ಹಾಗಾಗಿ ಶಿವಕುಮಾರ್ ಅವರಿಗೂ ಒಳ್ಳೆಯದನ್ನೇ ಬಯಸಿದ್ದೆ ಎಂದರು.
ಕಾನೂನಿಗೆ ಎಲ್ಲರೂ ತಲೆಬಾಗಲೇ ಬೇಕು. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಬಂದಿದ್ದನ್ನು ಧೈರ್ಯವಾಗಿ ಎದುರಿಸಬೇಕು ಎಂದರು.
ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಶ್ರೀರಾಮುಲು, ಸಿದ್ದರಾಮಯ್ಯ ಯಾವಾಗಲೂ ಆಕ್ರಮಣಕಾರಿ, ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಇಂತಹ ಹೇಳಿಕೆಗಳಿಂದಲೇ ಅವರ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಕನಸು ನನಸಾಗದು. ಮೈತ್ರಿ ಸರ್ಕಾರ ಬೀಳಲು ಅವರೇ ಕಾರಣ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


