'ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು?'
ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ಇದು ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಬ್ಬ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಳಿರುವ ಪ್ರಶ್ನೆಯಾಗಿದೆ.
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹದಿನೈದು ಸ್ಥಾನಗಳನ್ನು ಗೆದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು. ಅನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜತೆ ಸೇರಲ್ಲ, ಅವರ ಜತೆ ಸೇರಿ ಅನುಭವಿಸಿದ್ದು ಸಾಕು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ.
ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ...
ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ ಕೊಟ್ಟವರು ಯಾರು?
ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ ಎಲ್ಲ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ ಎಂದು ಕುಟುಕಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


