ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಇಬ್ಬರೂ ಕಾರಣ; ವಿಶ್ವನಾಥ್
ಮೈತ್ರಿ ಸರ್ಕಾರದ ಪತನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯೂ ಕಾರಣ ಎಂದು ಜೆಡಿಎಸ್ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ನವದೆಹಲಿ: ಮೈತ್ರಿ ಸರ್ಕಾರದ ಪತನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯೂ ಕಾರಣ ಎಂದು ಜೆಡಿಎಸ್ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ ಇಬ್ಬರು ಸಮಬಲರು. ಕಾಂಗ್ರೆಸ್ ಶಾಸಕರ ಸಮಸ್ಯೆಗಳನ್ನು ಸಿದ್ದರಾಮಯ್ಯ ಕೇಳಲಿಲ್ಲ. ಜೆಡಿಎಸ್ ಶಾಸಕರನ್ನು ಕುಮಾರಸ್ವಾಮಿ ಕೇಳಲಿಲ್ಲ. ಯಾರೊಂದಿಗೂ ಚರ್ಚಿಸದೇ ಮೈತ್ರಿ ಸರ್ಕಾರ ರಚನೆ ಮಾಡಿದ್ದೆ ತಪ್ಪು ಎಂದು ಆರೋಪಿಸಿದರು.
ಸರ್ಕಾರ ಪತನವಾದ ಬಳಿಕ ಇಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದು ಪರಸ್ಪರ ಒಬ್ಬರನ್ನೊಬ್ಬರು ಆರೋಪಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಪಕ್ಷ ರಾಜಕಾರಣ ಇಲ್ಲದ ಕಾರಣ ಪಕ್ಷಾಂತರಕ್ಕೆ ಕಾರಣವಾಗಿದೆ. ಯಾವುದೇ ಒಂದು ಪಕ್ಷ ಕುಟುಂಬ, ವ್ಯಕ್ತಿ, ಒಂದು ಗುಂಪಿಗೆ ಮಾತ್ರ ಸೀಮಿತವಾದಲ್ಲಿ ಪಕ್ಷಾಂತರ ಆಗುವುದು ಸಹಜ ಎಂದು ಪರೋಕ್ಷವಾಗಿ ಹೆಚ್.ಡಿ.ದೇವೇಗೌಡರನ್ನು ವಿಶ್ವನಾಥ್ ಕುಟುಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


