ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಹೆಚ್.ಎಂ.ರೇವಣ್ಣ ಗರಂ
ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಕಾರಣ ಎಂದು ಆರೋಪಿಸುತ್ತಿರುವ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮಾತಿನಲ್ಲಿ ಯಾವುದೇ ಹುರುಳಿಲ್ಲ. ಚುನಾಯಿತ ಪ್ರತಿನಿಧಿಗಳನ್ನು ಕುಮಾರಸ್ವಾಮಿ ಸರಿಯಾಗಿ ನಡೆಸಿಕೊಂಡಿಲ್ಲದ್ದೇ ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಮೇಲ್ಮನೆ ಕಾಂಗ್ರೆಸ್ ಸದಸ್ಯ .

ನವದೆಹಲಿ: ಮೈತ್ರಿ ಸರ್ಕಾರದ ಪತನಕ್ಕೆ ಕಾಂಗ್ರೆಸ್ ಕಾರಣ ಎಂದು ಆರೋಪಿಸುತ್ತಿರುವ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮಾತಿನಲ್ಲಿ ಯಾವುದೇ ಹುರುಳಿಲ್ಲ. ಚುನಾಯಿತ ಪ್ರತಿನಿಧಿಗಳನ್ನು ಕುಮಾರಸ್ವಾಮಿ ಸರಿಯಾಗಿ ನಡೆಸಿಕೊಂಡಿಲ್ಲದ್ದೇ ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಮೇಲ್ಮನೆ ಕಾಂಗ್ರೆಸ್ ಸದಸ್ಯ ಹೆಚ್.ಎಂ.ರೇವಣ್ಣ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲೆ ಕುಮಾರಸ್ವಾಮಿ ಆರೋಪ ಮಾಡುವುದು ಎಷ್ಟರಮಟ್ಟಿಗೆ ಸರಿ? ಕುಮಾರಸ್ವಾಮಿ ಬಳಿ ನಾನೇ ಏನಾದರೂ ಕೇಳಿದರೆ ಕೆಲಸ ಮಾಡುತ್ತಿರಲಿಲ್ಲ. ಬರಿ ಅಣ್ಣಾ ಏನಣ್ಣಾ ಎಂದು ಮಾತನಾಡಿ ಹಾಗೆಯೇ ಕಳುಹಿಸುತ್ತಿದ್ದರು. ಈಗ ತಮ್ಮ ತಪ್ಪನ್ನು ಸಿದ್ದರಾಮಯ್ಯ ಅವರ ಮೇಲೆ ಹೇರುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದಲ್ಲಿ ಕುಮಾರಸ್ವಾಮಿ ಸರಿಯಾಗಿ ನಡೆದುಕೊಂಡಿದ್ದರೆ ಯಾವುದೇ ತೊಂದರೆ ಆಗುತ್ತಿರಲಿಲ್ಲ. ಕುಮಾರಸ್ವಾಮಿ ನಡವಳಿಕೆ ಬಗ್ಗೆ ಅವರ ಪಕ್ಷದ ಪ್ರಮುಖ ನಾಯಕರೇ ಆರೋಪಿಸಿದ್ದಾರೆ.ಅವರಿಗೆ ಜೆಡಿಎಸ್ ಪಕ್ಷದ ಶಾಸಕರನ್ನೇ ಸರಿಯಾಗಿ ನಡೆಸಿಕೊಳ್ಳುವುದಕ್ಕೆ ಆಗಲಿಲ್ಲ ಎಂದ ಮೇಲೆ ಇನ್ನೂ ಕಾಂಗ್ರೆಸ್ ಶಾಸಕರೊಂದಿಗಿನ ಅವರ ವರ್ತನೆ ಹೇಗಿರಬಹುದು ಎಂದು ಹೆಚ್.ಎಂ.ರೇವಣ್ಣ ಮಾತಿನ ಚಾಟಿ ಬೀಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


