ಸರ್ಕಾರ ಪತನಕ್ಕೆ ಪ್ರಯತ್ನಿಸಲ್ಲ, ಮಧ್ಯಂತರ ಚುನಾವಣೆ ಬಗ್ಗೆ ಚಿಂತಿಸಿಲ್ಲ: ಎಚ್ ಡಿ ಕುಮಾರಸ್ವಾಮಿ
ಬಿಜೆಪಿ ಆಪರೇಷನ್ ಕಮಲ ಮಾಡಿ ಮೈತ್ರಿ ಸರ್ಕಾರ ಪತನಗೊಳಿಸಿದಂತೆ ಆಡಳಿತಾ ರೂಢ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಜೆಡಿಎಸ್ ಪ್ರಯತ್ನಿಸುವುದಿಲ್ಲ, ಮಧ್ಯಂತರ ಚುನಾವಣೆ ಬಗ್ಗೆ ಚಿಂತಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಳಗಾವಿ: ಬಿಜೆಪಿ ಆಪರೇಷನ್ ಕಮಲ ಮಾಡಿ ಮೈತ್ರಿ ಸರ್ಕಾರ ಪತನಗೊಳಿಸಿದಂತೆ ಆಡಳಿತಾ ರೂಢ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಜೆಡಿಎಸ್ ಪ್ರಯತ್ನಿಸುವುದಿಲ್ಲ, ಮಧ್ಯಂತರ ಚುನಾವಣೆ ಬಗ್ಗೆ ಚಿಂತಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇತರ ಪಕ್ಷಗಳ ನಾಯಕರು ಅಧಿಕಾರಕ್ಕಾಗಿ ಹಾತೂರೆಯಬಹುದು ಆದರೆ, ನಾವು ಹಾಗಲ್ಲ, ಪರಿಣಾಮಕಾರಿ ಪ್ರತಿಪಕ್ಷವಾಗಿ ಕೆಲಸ ಮಾಡುತ್ತೇವೆ. ಆ ಬಗ್ಗೆ ತಮ್ಮಗೆ ವಿಶ್ವಾಸವಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪದೇ ಪದೇ ಹೇಳಿತ್ತಿರುವಂತೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆ ಎಂಬ ಬಗ್ಗೆ ನನ್ನಗೆ ಅನ್ನಿಸುತ್ತಿಲ್ಲ. ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆ ನಂತರ ಇದು ಹೆಚ್ಚು ನಿಜವೆಂಬುದು ತೋರುತ್ತದೆ ಎಂದಿದ್ದಾರೆ.
ಮತ್ತೊಂದೆಡೆ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಸೂಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಜೆಡಿಎಸ್ ಕೋಮುವಾದಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದು ಕುಮಾರಸ್ವಾಮಿ ಹೇಳಿಕೆಯಿಂದಲೇ ಗೊತ್ತಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


