ಬಿಜೆಪಿಗೆ 'ಬಳ್ಳಾರಿ' ಶಾಕ್: 48ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ದಮ್ಮೂರ್ ಶೇಖರ್ ಅವರನ್ನು ನೇಮಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಳ್ಳಾರಿ ಜಿಲ್ಲಾಧ್ಯಕ್ಷ ಸೇರಿ ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು,

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ದಮ್ಮೂರ್ ಶೇಖರ್ ಅವರನ್ನು ನೇಮಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಳ್ಳಾರಿ ಜಿಲ್ಲಾಧ್ಯಕ್ಷ ಸೇರಿ ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಒಟ್ಟು 48 ಬಿಜೆಪಿ ಸದಸ್ಯರು ಮಂಗಳವಾರ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ,
ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಎಲ್ಲ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಜಿಲ್ಲಾಧ್ಯಕ್ಷ ಚನ್ನಬಸವನಗೌಡರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಶಾಸಕ ಜಿ.ಸೋಮಶೇಖರ ರೆಡ್ಡಿಯವರು ನನ್ನ ಸಾಮರ್ಥ್ಯದ ಬಗ್ಗೆ ಪ್ರಶ್ನಿಸಿದ್ದಾರೆ. ಕಳೆದ ಲೋಕಸಭೆ ಉಪಚುನಾವಣೆ, ಸಾರ್ವತ್ರಿಕ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಲ್ಲಿ ಪಕ್ಷಕ್ಕೆ ಎಷ್ಟು ಲೀಡ್ ನೀಡಿದ್ದಾರೆ? ಎಂದು ಅಂದು ನಾನು ಪ್ರಶ್ನೆ ಮಾಡದಿದ್ದಕ್ಕೆ ಇಂದು ನನ್ನ ಸಾಮರ್ಥ್ಯದ ಬಗ್ಗೆ ಮಾತನಾಡಿದ್ದೀರಾ ಎಂದು ಮರು ಪ್ರಶ್ನಿಸಿದ್ದಾರೆ.
ಬಿಜೆಪಿಯನ್ನು ಸೋಮಶೇಖರ್ ರೆಡ್ಡಿ ಹೈಜಾಕ್ ಮಾಡಲು ಯತ್ನಿಸುತ್ತಿದ್ದಾರೆ, ಸೋಮಶೇಖರ್ ರೆಡ್ಡಿ ಪಕ್ಷಕ್ಕಾಗಿ ಏನು ಮಾಡಿದ್ದಾರೆ, ಶ್ರೀರಾಮುಲು ಹೂವಿನ ಹಡಗಲಿಯಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು, ತಮ್ಮ ಆಂತರಿಕ ಕಲಹದಿಂದಾಗಿ ರೆಡ್ಡಿ ಪಕ್ಷವನ್ನು ಅಳವಿನ ಅಂಚಿಗೆ ತಂದು ನಿಲ್ಲಿಸಿದ್ದಾರೆ ಎಂದು ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಮಲಿಂಗಪ್ಪ ಆರೋಪಿಸಿದ್ದಾರೆ.
ಈ ಎಲ್ಲಾ ಜಿಲ್ಲಾ ನಾಯಕರುಗಳಿಗೆ ಶ್ರೀರಾಮುಲು ವಿರುದ್ದ ಯಾವುದೇ ವೈಷಮ್ಯವಿಲ್ಲ, ಶ್ರೀರಾಮುಲು ನಮ್ಮ ಮುಖಂಡ, ಅವರ ನಾಯಕತ್ವದ ಮೇಲೆ ನಮಗೆ ನಂಬಿಕೆಯಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


