ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಸ್ತ್ರಿಶಕ್ತಿ ಸಂಘಗಳಿಗೆ 1 ಲಕ್ಷರೂ ಶೂನ್ಯ ಬಡ್ಡಿದರಲ್ಲಿ ಸಾಲ!
ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆದರೆ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಕೋಲಾರ: ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆದರೆ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಭರವಸೆ ನೀಡಿದ್ದಾರೆ.
ರಾಯಲ್ಪಾಡು ಹೋಬಳಿಯ ಮುದಿಮುಡುಗು ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ನಿಂದ 63 ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳಿಗೆ 1.83ಕೋಟಿ ರೂ.ಸಾಲ ವಿತರಣೆ ಮಾಡಿಮಾತನಾಡಿದ ಅವರು, ಸ್ತ್ರೀಶಕ್ತಿ ಸಂಘಗಳು ತಾಲೂಕಿನಲ್ಲಿ ಆಸ್ತಿತ್ವವನ್ನೇ ಕಳೆದು ಕೊಂಡು ಬೆರಳೆಣಿಕೆಯಷ್ಟು ಮಾತ್ರ ಕಾರ್ಯ ನಿರ್ವಹಿಸು ತ್ತಿದ್ದವು.ಈ ವೇಳೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಯೋಜನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದು 30 ಸಾವಿರದಿಂದ 50 ಸಾವಿರ ರೂಗೆ ಏರಿಸಲಾಯಿತು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


