ರಾಜಕೀಯ

ಉಪಚುನಾವಣೆಗೆ ಕೈ ಪಾಳಯ ಸಜ್ಜು: ಎಂಟು ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ

ಮುಂದಿನ ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ಪಾಳಯ ಸಜ್ಜಾಗಿದೆ. ಜಾತ್ಯಾತೀತ ಜನತಾದಳದೊಡನೆ ಮೈತ್ರಿ ಮುರಿದುಕೊಂಡು ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿರುವ ಕೈ ಪಡೆ ಎಂಟು ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿದೆ.

ಉಪಚುನಾವಣೆಗೆ ಕೈ ಪಾಳಯ ಸಜ್ಜು: ಎಂಟು ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಮುಂದಿನ ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಹದಿನೈದು ಕ್ಷೇತ್ರಗಳ ಉಪಚುನಾವಣೆಗೆ ರಾಜ್ಯ ಕಾಂಗ್ರೆಸ್ ಪಾಳಯ ಸಜ್ಜಾಗಿದೆ. ಜಾತ್ಯಾತೀತ ಜನತಾದಳದೊಡನೆ ಮೈತ್ರಿ ಮುರಿದುಕೊಂಡು ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿರುವ ಕೈ ಪಡೆ ಎಂಟು ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆಗೊಳಿಸಿದೆ.

ಅಭ್ಯರ್ಥಿಗಳ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿಸಿದ್ದಾರೆ 

ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರ ಒಪ್ಪಿಗೆಯ ಮೇರೆಗೆ ಕರ್ನಾಟಕದ 8 ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟ್ತರ್ ಖಾತೆಯಲ್ಲಿ ಹೇಳಿದೆ.

ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಹೀಗಿದೆ-

ಭೀಮಣ್ಣ ನಾಯಕ್- ಯಲ್ಲಾಪುರ
ಬಿ.ಎಚ್.ಬನ್ನಿಕೋಡ- ಹಿರೇಕೆರೂರು
ಕೆ.ಬಿ.ಕೋಳಿವಾಡ- ರಾಣಿಬೆನ್ನೂರು
ಎಂ.ಆಂಜನಪ್ಪ- ಚಿಕ್ಕಬಳ್ಳಾಪುರ
ಎಂ.ನಾರಾಯಣಸ್ವಾಮಿ- ಕೆ.ಆರ್.ಪುರ
ಎಂ.ಶಿವರಾಜ್- ಮಹಾಲಕ್ಷ್ಮಿ ಲೇಔಟ್
ಪದ್ಮಾವತಿ ಸುರೇಶ್- ಹೊಸಕೋಟೆ
ಎಚ್.ಪಿ.ಮಂಜುನಾಥ್- ಹುಣಸೂರು

ರಾಜ್ಯದ ಹದಿನೈದು ವಿಧಾನಸಭೆ ಕ್ಷೇತ್ರಗಳಿಗೆ ಡಿಸೆಂಬರ್ ಐದರಂದು ಉಪಚುನಾವಣೆ ಮತದಾನ ನಡೆಯಲಿದೆ. ನವೆಂಬರ್ 11ರಂದು ಅಧಿಸೂಚನೆ ಹೊರಬೀಳಲಿದ್ದು  ನಾಮಪತ್ರ ಸಲ್ಲಿಕೆಗೆ ನವೆಂಬರ್ 18 ಕಡೇ ದಿನ. ನವೆಂಬರ್ 19 ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಮಪತ್ರ ಹಿಂಪಡೆಯಲು ನವೆಂಬರ್ 21 ಕಡೇ ದಿನವಾಗಿದೆ.ಡಿಸೆಂಬರ್ 5ರಂದು ನಡೆವ ಮತದಾನದ ಫಲಿತಾಂಶ  ಡಿಸೆಂಬರ್ 9ರಂದು ಹೊರಬೀಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.