ಡಿಕೆಶಿ ಬಂಧನ ರಾಜಕೀಯ ಪ್ರೇರಿತ: ಕಾಂಗ್ರೆಸ್ ನಾಯಕರ ಆರೋಪ
ರಾಜಕೀಯ ಪ್ರೇರಿತದಿಂದ ಡಿಕೆ ಶಿವಕುಮಾರ್ ಅವರ ಬಂಧವಾಗಿರುವುದಾಗಿ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ರಾಜಕೀಯ ಪ್ರೇರಿತದಿಂದ ಡಿಕೆ ಶಿವಕುಮಾರ್ ಅವರ ಬಂಧವಾಗಿರುವುದಾಗಿ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಸಹದ್ಯೋಗಿ ಡಿ.ಕೆ.ಶಿವಕುಮಾರ್ ಅವರ ಬಂಧನ ಅತ್ಯಂತ ಖಂಡನೀಯ ಕೃತ್ಯವಾಗಿದೆ. ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿ ಎದುರಿಸಲಾಗದೆ ಅಧಿಕಾರ ದುರುಪಯೋಗದ ಮೂಲಕ ದಮನಿಸುವ ಯತ್ನ ಹೇಡಿತನದ್ದು. ಇಂತಹ ಕಷ್ಟದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಶಿವಕುಮಾರ್ ಬೆಂಬಲಕ್ಕಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಾಜಕೀಯ ಪ್ರೇರಿತದಿಂದ ಡಿಕೆ ಶಿವಕುಮಾರ್ ಬಂಧನವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಖಂಡಿಸಿದ್ದಾರೆ
ಮತ್ತೊಂದೆದೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ, ಇದು ಶೇ. 100 ರಷ್ಟು ರಾಜಕೀಯ ಪ್ರೇರಿತ ಬಂಧನವಾಗಿದೆ. ಕೇಂದ್ರ ಸರ್ಕಾರ ಆದಾಯ ತೆರಿಗೆ, ಇಡಿ, ರಿಸರ್ವ ಬ್ಯಾಂಕ್ ಸ್ವಾಯತ್ತ ಸಂಸ್ಥೆಗಳನ್ನು ಕೈಗೊಂಬೆ ಗಳಾಗನ್ನಾಗಿ ಮಾಡಿಕೊಂಡು ರಾಜಕೀಯ ದುರುದ್ದೇಶದಿಂದ ವಿರೋಧಪಕ್ಷವನ್ನು ತುಳಿಯುವ ಕೆಲಸ ಮಾಡುತ್ತದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


